ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಮರ ಕತ್ತರಿಸಿದ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

Last Updated 10 ಸೆಪ್ಟೆಂಬರ್ 2020, 2:20 IST
ಅಕ್ಷರ ಗಾತ್ರ

ಮೈಸೂರು: ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಉದ್ಯಾನದಲ್ಲಿದ್ದ 3 ಮರಗಳನ್ನು ಕತ್ತರಿಸಿದ ವಾಣಿವಿಲಾಸ ನೀರು ಸರಬರಾಜು ಕೇಂದ್ರದ ಇಬ್ಬರು ಅಧಿಕಾರಿಗಳ ವಿರುದ್ಧ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಪರಿಸರವಾದಿ ಭಾನು ಮೋಹನ್ ಅವರು ದೂರು ನೀಡಿದ್ದರು.

ಬೃಂದಾವನ ಬಡಾವಣೆಯಲ್ಲಿರುವ ಉದ್ಯಾನದಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ಸ್ಥಾಪನೆಗಾಗಿ ಒಟ್ಟು 4 ಮರ ಗಳನ್ನು ಕತ್ತರಿಸಲಾಗುತ್ತಿತ್ತು. ಇವರನ್ನು ಭಾನುಮೋಹನ್ ತಡೆದು ಅರಣ್ಯ ಇಲಾಖೆಗೆ ಮಾಹಿತಿ ನೀಡುವಷ್ಟರಲ್ಲಿ 3 ಮರಗಳನ್ನು ಸಂಪೂರ್ಣ ಕರ್ತರಿಸ ಲಾಗಿತ್ತು. ಸ್ಥಳಕ್ಕೆ ಬಂದ ಅರಣ್ಯಾಧಿಕಾರಿ ಗಳು ಅನುಮತಿ ಪಡೆದಿಲ್ಲ ಎಂದು ಹೇಳಿ ಸಹಾಯಕ ಎಂಜಿನಿಯರ್ ಅಕ್ಷತಾ, ವಾಟರ್ ಇನ್‌ಸ್ಪೆಕ್ಟರ್ ಮಹದೇವು ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಉಪವಲಯ ಅರಣ್ಯಾಧಿಕಾರಿ ಮಂಜು, ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಮಹಿಳೆ ಆತ್ಮಹತ್ಯೆ‌

ಮೈಸೂರು: ಇಲ್ಲಿನ ಕನಕಗಿರಿ ನಿವಾಸಿ ಮಹದೇವಮ್ಮ (45) ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರಿಗೆ ಮೂರ್ಛೆ ಕಾಯಿಲೆ ಇತ್ತು. ಇದರಿಂದ ಬೇಸರಗೊಂಡು ಧಾನ್ಯಗಳಿಗೆ ಹುಳು ಬಾರದಂತೆ ತಡೆಯುವ ಮಾತ್ರಗಳನ್ನು ಸೇವಿಸಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ವಿದ್ಯಾರಣ್ಯಪುರಂ ಠಾಣೆಯಲ್ಲಿ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT