ಸೋಮವಾರ, ಅಕ್ಟೋಬರ್ 26, 2020
23 °C

ಜಾತಿ ಜನಗಣತಿ ವರದಿ ಬಿಡುಗಡೆಗೆ ಆಗ್ರಹಿಸಿ ಸಹಿ ಸಂಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಜಾತಿ ಜನಗಣತಿ ವರದಿ ಯನ್ನು ಶೀಘ್ರ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ವತಿಯಿಂದ ಶನಿವಾರ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು.

ಪುರಭವನ ಆವರಣದ ಅಂಬೇ ಡ್ಕರ್ ಪ್ರತಿಮೆ ಎದುರು ಸೇರಿದ ವೇದಿ ಕೆಯ ಸದಸ್ಯರು ಜಾತಿ ಜನಗಣತಿ ವರದಿ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು.

ಈ ಸಂದರ್ಭ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮು ಮಾತನಾಡಿ, ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ₹ 170 ಕೋಟಿ ವೆಚ್ಚದಲ್ಲಿ ಎಚ್.ಕಾಂತರಾಜ ಆಯೋಗವು ಜಾತಿವಾರು ಸಮಗ್ರ ಜನಗಣತಿ ನಡೆಸಿ ವರದಿ ಸಲ್ಲಿಸಿದೆ. ಆದರೆ, ಇನ್ನೂ ಬಿಡುಗಡೆ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಾಹಿತಿ ಪ್ರೊ.ಕೆ.ಎಸ್.ಭಗವಾನ್, ಮಾಜಿ ಮೇಯರ್ ಪುರುಷೋತ್ತಮ್, ಚಂದ್ರಶೇಖರ್, ಲೋಕೇಶ್ ಮಾದಪುರ, .ಕೆ.ರವಿ, ಪುಟ್ಟಸ್ವಾಮಿ, ಡಾ.ಸೋಮಶೇಖರ್ ಗೌಡ ಅನೇಕರು ಭಾಗವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.