ಭಾನುವಾರ, ಸೆಪ್ಟೆಂಬರ್ 27, 2020
27 °C

ಕೇಂದ್ರ ಪರಿಹಾರ ಬಿಡುಗಡೆ ಮಾಡಲಿ: ರೈತ ಮುಖಂಡ ಬಡಗಲಪುರ ನಾಗೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ರಾಜ್ಯದ ಹಲವೆಡೆ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಕೇಂದ್ರ ಸರ್ಕಾರ ತಕ್ಷಣ ಪರಿಹಾರ ಬಿಡುಗಡೆ ಮಾಡಲಿ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಸತತ ಎರಡನೇ ವರ್ಷವೂ ಅತಿವೃಷ್ಟಿ ಉಂಟಾಗಿದ್ದು, ಸಾಕಷ್ಟು ಹಾನಿಯಾಗಿದೆ. ಕೇಂದ್ರದ ನಿಯೋಗವು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವಸ್ತುಸ್ಥಿತಿಯ ಅಧ್ಯಯನ ನಡೆಸಲಿ. ಕಳೆದ ವರ್ಷ ಪರಿಹಾರ ನೀಡದೆ ಕೇಂದ್ರ ಸರ್ಕಾರ ನುಣುಚಿಕೊಂಡಿತ್ತು. ರಾಜ್ಯದ ಆರ್ಥಿಕ ಸ್ಥಿತಿ ಚೆನ್ನಾಗಿಲ್ಲ. ಈ ಬಾರಿ ಶೀಘ್ರ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಲಿ ಎಂದು ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

‘ರಾಜ್ಯದಲ್ಲಿ ಬಿಜೆಪಿಯ 25 ಸಂಸದರು ಇದ್ದು ಎಲ್ಲರೂ ಪ್ರಧಾನಿ, ಗೃಹ ಸಚಿವ ಮತ್ತು ಹಣಕಾಸು ಸಚಿವರನ್ನು ಭೇಟಿಯಾಗಿ ಪರಿಹಾರ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಲಿ. ಸಂಸದರಿಗೆ ಪ್ರಧಾನಿ ಭೇಟಿಯಾಗುವ ಧೈರ್ಯ ಇಲ್ಲದಿದ್ದರೆ, ಜತೆಗೆ ನಮ್ಮನ್ನು ಕರೆದೊಯ್ಯಲಿ’ ಎಂದರು.

ಹೋರಾಟಕ್ಕೆ ಇಂದು ಚಾಲನೆ: ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ವಿರೋಧಿಸಿ ‘ನಮ್ಮ ಭೂಮಿ–ನಮ್ಮ ಹಕ್ಕು– ಅನ್ಯರಿಗೆ ಮಾರಾಟಕ್ಕಿಲ್ಲ’ ಎಂಬ ಘೋಷಣೆಯಡಿ ಹಳ್ಳಿಗಳಿಂದ ಹೋರಾಟ ಆರಂಭಿಸಲಿದ್ದು, ಆ.8 ರಂದು ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದತುಂಗ ಗ್ರಾಮದಲ್ಲಿ ಚಾಲನೆ ನೀಡಲಾಗುವುದು ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು