ಮಂಗಳವಾರ, ನವೆಂಬರ್ 24, 2020
22 °C

ಮೈಸೂರು: ಸರಳವಾಗಿ ನೆರವೇರಿದ ಚಾಮುಂಡೇಶ್ವರಿ ರಥೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಇಲ್ಲಿನ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ರಥೋತ್ಸವವು ಗುರುವಾರ ಸರಳವಾಗಿ ನೆರವೇರಿತು. ದೊಡ್ಡರಥದ ಬದಲಿಗೆ ಚಿಕ್ಕರಥದಲ್ಲಿ ಉತ್ಸವಮೂರ್ತಿಯನ್ನು ಇರಿಸಿದ ಮೆರವಣಿಗೆಗೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಲನೆ ನೀಡಿದರು.

ಪ್ರತಿಬಾರಿಯೂ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನಡೆಯುತ್ತಿದ್ದ ರಥೋತ್ಸವಕ್ಕೆ ಈ ಬಾರಿ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿತ್ತು. ಚಾಮುಂಡಿಬೆಟ್ಟ ಹಾಗೂ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರಷ್ಟೇ ರಥೋತ್ಸವದಲ್ಲಿ ಇದ್ದರು. ಹಲವು ಮಂದಿ ಗುಂಪುಗುಂಪಾಗಿದ್ದ ದೃಶ್ಯಗಳು ಕಂಡು ಬಂದವು.

‘ಸಂಪ್ರದಾಯದಂತೆ ಯಾವುದೇ ಲೋಪದೋಷಗಳಿಲ್ಲದೇ ಕಾರ್ಯಕ್ರಮ ಮಾಡಿದ್ದೇವೆ. ಈ ಬಾರಿ ತೆಪ್ಪೋತ್ಸವ ಇರುವುದಿಲ್ಲ’ ಎಂದು ದೇಗುಲದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ತಿಳಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ‘ಕೊರೊನಾ ಕಾಲದ ಅಗತ್ಯಕ್ಕೆ ತಕ್ಕಂತೆ ಸರಳವಾಗಿ, ಸಾಂಪ್ರದಾಯಿಕವಾಗಿ ರಥೋತ್ಸವ ನಡೆದಿದೆ’ ಎಂದು ಹೇಳಿದರು.

 

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.