ಭಾನುವಾರ, ಸೆಪ್ಟೆಂಬರ್ 26, 2021
21 °C

ಚಂದನ್ ಶೆಟ್ಟಿ-ನಿವೇದಿತಾ ಗೌಡ ಮದುವೆ ಇಂದು-ನಾಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಬಿಗ್ ಬಾಸ್ ಖ್ಯಾತಿಯ ಚಂದನ್ ಶೆಟ್ಟಿ-ನಿವೇದಿತಾ ಗೌಡ ಹಸೆಮಣೆ ಏರಲು ಸಿದ್ಧವಾಗಿದ್ದಾರೆ. ಮದುವೆ ಫೆ.25 ಹಾಗೂ 26ರಂದು ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.

ಇದಕ್ಕಾಗಿ ಮೈಸೂರಿನ ದಟ್ಟಗಳ್ಳಿಯ ನಿವೇದಿತಾ ಗೌಡ ಮನೆಯಲ್ಲಿ ಸಕಲ ಸಿದ್ಧತೆ ನಡೆದಿದೆ. ಸಾಂಪ್ರದಾಯಿಕವಾಗಿ ನಡೆಯಲಿರುವ ಚಂದನ್- ನಿವೇದಿತಾ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್ ಕಲಾವಿದರು, ಗಾಯಕರು ಹಾಗೂ ರಾಜಕೀಯ ಗಣ್ಯರು ಆಗಮಿಸುವ ನಿರೀಕ್ಷೆಯಿದೆ.

ಯುವ ದಸರಾದ ಸರ್ಕಾರಿ ವೇದಿಕೆಯಲ್ಲಿ ಪರಸ್ಪರ ಪ್ರೀತಿ ಹಂಚಿಕೊಂಡಿದ್ದ ಈ ಜೋಡಿ ವಿವಾದಕ್ಕೀಡಾಗಿತ್ತು. ಬಳಿಕ ಮೈಸೂರಿನಲ್ಲಿ ಅದ್ಧೂರಿಯಾಗೇ ಎಂಗೇಜ್ ಮೆಂಟ್ ಮಾಡಿಕೊಂಡಿದ್ದು, ಈಗ ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು