ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ದರೋಡೆ, ಸಾಮೂಹಿಕ ಅತ್ಯಾಚಾರ ಪ್ರಕರಣಗಳಲ್ಲಿ ದೋಷಾರೋಪ ಪಟ್ಟಿ ಸಲ್ಲಿಕೆ

Last Updated 27 ನವೆಂಬರ್ 2021, 12:48 IST
ಅಕ್ಷರ ಗಾತ್ರ

ಮೈಸೂರು: ರಾಷ್ಟ್ರಮಟ್ಟದಲ್ಲಿ ಸಂಚಲನ ಮೂಡಿಸಿದ್ದ ನಗರದ ಚಿನ್ನದ ಅಂಗಡಿ ದರೋಡೆ, ಕೊಲೆ ಹಾಗೂ‌ ಚಾಮುಂಡಿಬೆಟ್ಟದ ತಪ್ಪಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 6 ಮಂದಿ ಆರೋಪಿಗಳ‌ ವಿರುದ್ಧ ‌1,499 ಪುಟಗಳಷ್ಟು ದೋಷಾರೋಪ ಪಟ್ಟಿಯು ಇಲ್ಲಿನ ಮೂರನೇ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದೆ. ಬಂಧಿಸಲಾಗಿದ್ದ 7 ಮಂದಿಯ ಪೈಕಿ ಒಬ್ಬ ಆರೋಪಿಯ ಪಾತ್ರ ಘಟನೆಯಲ್ಲಿ ಇಲ್ಲ ಎಂಬುದು ಗೊತ್ತಾದ ನಂತರ‌ ಆತನನ್ನು ಬಿಟ್ಟು ಉಳಿದ 6 ಮಂದಿಯ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ. ವಿಚಾರಣೆ ಅರಂಭವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಐಪಿಸಿ 397, 376 ಬಿ, 109, 120 ಬಿ, 334, 325, 326, ಸೆಕ್ಷನ್ಸ್ ಗಳನ್ನು ಆರೋಪಿಗಳ ವಿರುದ್ಧ ಹಾಕಲಾಗಿದೆ ಅವರು ಹೇಳಿದರು.

ಚಿನ್ನದ ಅಂಗಡಿ ದರೋಡೆ ಮತ್ತು ಕೊಲೆ ಪ್ರಕರಣದಲ್ಲಿ 8 ಮಂದಿಯ ವಿರುದ್ಧ ಇಲ್ಲಿನ 2 ನೇ ಜೆಎಂಎಫ್ ಸಿ ನ್ಯಾಯಾಲಯದಲ್ಲಿ 1,410 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಐಪಿಸಿ 396, 394, 120 ಬಿ, ಸೆಕ್ಷನ್ಸ್ ಗಳನ್ನು ಆರೋಪಿಗಳ ವಿರುದ್ಧ ಹಾಕಲಾಗಿದೆ. ಆರೋಪಿಗಳ ಪೈಕಿ 7 ಮಂದಿಯನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿಯ ಹುಡುಕಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT