ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 5 ಸಾವಿರ ಪರಿಹಾರ ಚೆಕ್ ವಿತರಣೆ

Last Updated 25 ಮೇ 2019, 20:01 IST
ಅಕ್ಷರ ಗಾತ್ರ

ಹುಣಸೂರು: ತಾಲ್ಲೂಕಿನ ಬಿ.ಆರ್‌.ಕಾವಲ್ ಭಾಗದಲ್ಲಿ ಗುರುವಾರ ರಾತ್ರಿ ಸುರಿದ ಭಾರಿ ಮಳೆಯಿಂದ ತೀವ್ರ ಹಾನಿಗೊಳಗಾಗಿದ್ದ 5 ಮನೆಯ ಮಾಲೀಕರಿಗೆ ಶನಿವಾರ ತಲಾ ₹ 5 ಸಾವಿರ ಪರಿಹಾರ ಚೆಕ್ ವಿತರಿಸಲಾಯಿತು.

ಹಾನಿಯುಂಟಾಗಿದ್ದ ಸ್ಥಳಕ್ಕೆ ತಾಲ್ಲೂಕು ದಂಡಾಧಿಕಾರಿ ಬಸವರಾಜ್ ಹಾಗೂ ತಾಲ್ಲೂಕು ಪಂಚಾಯಿತಿ ಅಧಿಕಾರಿ ಕೃಷ್ಣಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಮನೆಯ ಚಾವಣಿ ಸರಿಪಡಿಸಿಕೊಳ್ಳಲು ಗ್ರಾಮ ಪಂಚಾಯಿತಿಯ ಶೇ 25 ಅನುದಾನದಲ್ಲಿ ₹ 5 ಸಾವಿರ ಪರಿಹಾರ ಚೆಕ್‌ ಅನ್ನು ಸ್ಥಳದಲ್ಲೇ ವಿತರಿಸಲಾಯಿತು.

ಈ ವೇಳೆ ಇಒ ಕೃಷ್ಣಕುಮಾರ್‌ ಮಾತನಾಡಿ, ‘ಪಂಚಾಯಿತಿ ವ್ಯಾಪ್ತಿಯಲ್ಲಿದ್ದು, ಪ್ರಕೃತಿ ವಿಕೋಪಗಳಿಗೆ ಒಳಗಾದಲ್ಲಿ ಪಂಚಾಯಿತಿಯ ಶೇ 25ರ ಅನುದಾನದಲ್ಲೇ ಪರಿಹಾರ ನೀಡುವ ವ್ಯವಸ್ಥೆಯನ್ನು ಸರ್ಕಾರ ಕಲ್ಪಿಸಿದೆ. ಈ ವ್ಯವಸ್ಥೆಯನ್ನು ತಾಲ್ಲೂಕಿನಾದ್ಯಂತ ಜಾರಿಗೊಳಿಸಿ ಪ್ರಾಕೃತಿಕ ವಿಕೋಪದ ಸಂದರ್ಭಗಳಲ್ಲಿ ನೊಂದವರಿಗೆ ಪರಿಹಾರ ನೀಡಲಾಗುತ್ತದೆ’ ಎಂದು ಮಾಹಿತಿ ನೀಡಿದರು.

ಕಡಮನುಗನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೀಲಾರಾಜು ಇದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT