ಮೈಸೂರು: ಟೋಕಿಯೊ ಒಲಿಂಪಿಕ್ಸ್‌ಗೆ ಸಜ್ಜಾಗುತ್ತಿರುವ ಭಾರತೀಯ ಕ್ರೀಡಾಪಟುಗಳಲ್ಲಿ ಹುಮ್ಮಸ್ಸು ತುಂಬಲು ನೈರುತ್ಯ ರೈಲ್ವೆ ಮುಂದಾಗಿದೆ.

ಈ ನಿಟ್ಟಿನಲ್ಲಿ ನೈರುತ್ಯ ರೈಲ್ವೆ ಮೈಸೂರು ವಿಭಾಗೀಯ ವತಿಯಿಂದ ಮೈಸೂರು, ಹಾಸನ, ಅರಸೀಕೆರೆ ಹಾಗೂ ಶಿವಮೊಗ್ಗ ರೈಲ್ವೆ ನಿಲ್ದಾಣಗಳ ಸೆಲ್ಫಿ ಪಾಯಿಂಟ್‌ನಲ್ಲಿ ‘ಚಿಯರ್ ಫಾರ್ ಇಂಡಿಯಾ’ ಅಭಿಯಾನ ಆರಂಭಿಸಲಾಗಿದೆ.

ಈ ಸೆಲ್ಫಿ ಪಾಯಿಂಟ್‌ಗಳಲ್ಲಿ ರೈಲ್ವೆ ಪ್ರಯಾಣಿಕರು ಕ್ರೀಡಾಪಟುಗಳಿಗೆ ಚಿಯರ್ ಮಾಡುವ ಸೆಲ್ಫಿ ತೆಗೆದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವಂತೆ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ರಾಹುಲ್ ಅಗರವಾಲ್ ಕೋರಿದ್ದಾರೆ.

ಈ ಮೂಲಕ ಜುಲೈ 23ರಂದು ಆರಂಭವಾಗಲಿರುವ ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ಕ್ರೀಡಾಪಟುಗಳಿಗೆ ಸ್ಫೂರ್ತಿ ತುಂಬುವ ಅಭಿಯಾನಕ್ಕೆ ಕೈಜೋಡಿಸುವಂತೆ ಕರೆ ನೀಡಿದ್ದಾರೆ.

ರೈಲ್ವೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ರೀಡಾಪಟುಗಳು ಈಗಾಗಲೇ ಸೆಲ್ಫಿ ತೆಗೆದುಕೊಂಡು ಹಂಚಿಕೊಳ್ಳುತ್ತಿದ್ದಾರೆ. ಭಾರತೀಯ ರೈಲ್ವೆ ವತಿಯಿಂದ ದೇಶದಾದ್ಯಂತ ‘ಚಿಯರ್ ಫಾರ್ ಇಂಡಿಯಾ’ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.