ಶನಿವಾರ, ಜೂನ್ 25, 2022
28 °C

ಶಿಲ್ಪಾನಾಗ್ ನನಗೆ ರಾಜೀನಾಮೆ ಸಲ್ಲಿಸಿಲ್ಲ: ಮುಖ್ಯ ಕಾರ್ಯದರ್ಶಿ ರವಿಕುಮಾರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್‌ ಅವರು ನನಗೆ ರಾಜೀನಾಮೆ ಪತ್ರ ಸಲ್ಲಿಸಿಲ್ಲ ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಹೇಳಿದರು.

ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಭೆ ನಡೆಸಲಷ್ಟೇ ಮೈಸೂರಿಗೆ ಭೇಟಿ ನೀಡಿರುವೆ’ ಎಂದು ಹೇಳಿದರು.

ರವಿಕುಮಾರ್‌ ಭೇಟಿಯಾದ ರೋಹಿಣಿ ಸಿಂಧೂರಿ: ಆಡಳಿತ ತರಬೇತಿ‌ ಸಂಸ್ಥೆಗೆ ನಿಗದಿತ ಸಮಯಕ್ಕಿಂತ ಮುನ್ನ ಸಭೆಗೆ ಆಗಮಿಸಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರನ್ನು ಭೇಟಿಯಾದರು. ಸದ್ಯ ಮೈಸೂರಿನಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ  ರೋಹಿಣಿ ವಿವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜೀನಾಮೆ ಅಂಗೀಕರಿಸದಂತೆ ಒತ್ತಾಯ: ಶಿಲ್ಪಾನಾಗ್ ರವರ ರಾಜೀನಾಮೆ ಅಂಗೀಕಾರ ಮಾಡದಂತೆ ಪಾಲಿಕೆ ಸದಸ್ಯರು ಒತ್ತಾಯಿಸಿದ್ದಾರೆ. ಮುಖ್ಯ ಕಾರ್ಯದರ್ಶಿ ಭೇಟಿ ಸಾಧ್ಯವಾಗದ ಹಿನ್ನೆಲೆ ತಹಶೀಲ್ದಾರ್‌ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಇವನ್ನೂ ಓದಿ...

ಒಬ್ಬರ ಅಹಂನಿಂದ ವ್ಯವಸ್ಥೆ ಹದಗೆಡಬಾರದು: ಸಿಂಧೂರಿ ವಿರುದ್ಧ ಶಿಲ್ಪಾ ಮತ್ತೆ ಆಕ್ರೋಶ

ಐಎಎಸ್‌ ಅಧಿಕಾರಿ ಶಿಲ್ಪಾ ನಾಗ್‌ ರಾಜೀನಾಮೆ: ಸಾಂತ್ವನ ಹೇಳಿದ್ದೇ ಮುಳುವಾಯಿತೇ?

ರೋಹಿಣಿ ಸಿಂಧೂರಿ ವಿರುದ್ಧ ಅಸಮಾಧಾನ: ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾ ರಾಜೀನಾಮೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು