ಬಿಳಿಕೆರೆ: ಹೋಬಳಿಯ ಆಯರಹಳ್ಳಿ ಗ್ರಾಮದಲ್ಲಿ ₹ 5ರ ನಾಣ್ಯ ನುಂಗಿದ ನಾಲ್ಕು ವರ್ಷದ ಹೆಣ್ಣು ಮಗು ಭಾನುವಾರ ಮೃತಪಟ್ಟಿದೆ.
ಖುಷಿ ಮೃತ ಬಾಲಕಿ.
ಹಿರಿಕ್ಯಾತನಹಳ್ಳಿಯ ಅಜ್ಜಿ ಮನೆಯಲ್ಲಿದ್ದ ಖುಷಿ ಶುಕ್ರವಾರ ನಾಣ್ಯದೊಂದಿಗೆ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ನುಂಗಿದ್ದಾಳೆ.
ತಕ್ಷಣವೇ ಪಾಲಕರು ಆಕೆಯನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಸ್ಪಂದಿಸದೆ ಮೃತಪಟ್ಟಿದೆ ಎಂಬುದು ತಿಳಿದು ಬಂದಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.