ಗುರುವಾರ , ಅಕ್ಟೋಬರ್ 6, 2022
24 °C

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಮೈಸೂರು ಅಭಿವೃದ್ಧಿಯಾಗಿಲ್ಲ: ಸಿಎಂ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ‘ಪಕ್ಷದ ಶಿವಕುಮಾರ್‌ ಹಾಗೂ ಜಿ.ರೂಪಾ ಕ್ರಮವಾಗಿ ಮೇಯರ್ ಮತ್ತು ಉಪ ಮೇಯರ್‌ ಆಗಿ ಆಯ್ಕೆಯಾಗಿರುವುದರಿಂದ ಮೈಸೂರಿಗೆ ಶುಭ ದಿನ. ಅವರ ಕಾಲದಲ್ಲಿ ಮೈಸೂರಿನ ಸಮಗ್ರ ಅಭಿವೃದ್ಧಿ ಆಗಲಿ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಶಯ ವ್ಯಕ್ತಪಡಿಸಿದರು.

‘ಈ ಜಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಸಂಸದ ಪ್ರತಾಪ ಸಿಂಹ, ಪದಾಧಿಕಾರಿಗಳು ಹಾಗೂ ಪಾಲಿಕೆ ಸದಸ್ಯರೆಲ್ಲರೂ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಇಲ್ಲಿ ಜೆಡಿಎಸ್‌–ಬಿಜೆಪಿಯ ಹೊಂದಾಣಿಕೆ ಪ್ರಶ್ನೆ ಇಲ್ಲ. ಸ್ಥಳೀಯವಾಗಿ, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ನಗರದ ಅಭಿವೃದ್ಧಿಗೆ ಆಗಿರುವ ಹಿನ್ನಡೆ ಅವರಿಗೆ ನಮಗಿಂತ ಹೆಚ್ಚು ತಿಳಿದುಕೊಂಡಿದ್ದರಿಂದ ಈ ನಿರ್ಣಯ ಬಂದಿದೆ’ ಎಂದರು.

‘ನಾವು ಸ್ಪರ್ಧಿಸುತ್ತಿದ್ದೇವೆ, ಯಾರು ಬೇಕಾದರೂ ಸ್ಪರ್ಧಿಸಬಹುದು ಎಂದು ಹೇಳಿದ್ದೆವು. ಜೆಡಿಎಸ್‌ನವರು ಉಪ ಮೇಯರ್ ಸ್ಥಾನಕ್ಕೆ ಪ್ರಯತ್ನಿಸಿದರು. ಆದರೆ,  ತಾಂತ್ರಿಕ ಕಾರಣದಿಂದ ಗೆಲುವು ಪಡೆಯಲಾಗಲಿಲ್ಲ. ಈಗ ಚುನಾವಣೆ ಮುಗಿದಿದ್ದು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮೈಸೂರಿನ ಸಮಗ್ರ ಅಭಿವೃದ್ಧಿ ನಮ್ಮೆಲ್ಲರ ಗುರಿಯಾಗಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು