ಮೈಸೂರು: ಮೈಸೂರಿನ ವಸ್ತುಪ್ರದರ್ಶನ ಮೈದಾನವನ್ನು ವರ್ಷವಿಡೀ ಉಪಯೋಗ ಮಾಡಿಕೊಳ್ಳುವ ನಿಟ್ಟಿನಲ್ಲಿ ಶಾಶ್ವತ ವಸ್ತುಪ್ರದರ್ಶನ ಆಯೋಜಿಸುವ ಬಗ್ಗೆ ಯೋಜನೆ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಮೈಸೂರಿನಲ್ಲಿ ಪ್ರವಾಸೋದ್ಯಮ ಸರ್ಕಿಟ್ ರೂಪಿಸಲು ಸಮಗ್ರ ಚಿಂತನೆ ನಡೆಸಿ ನಿರ್ಣಯವನ್ನು ಶೀಘ್ರದಲ್ಲಿಯೇ ಕೈಗೊಳ್ಳಲಾಗುವುದು ಎಂದರು. ಮುಂಬರುವ ವರ್ಷಗಳಲ್ಲಿ ಪರಿಸ್ಥಿತಿ ಉತ್ತಮಗೊಂಡರೆ ಅದ್ದೂರಿಯಾಗಿ ದಸರಾ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು.

ಸಿಂಧಗಿ ಮತ್ತು ಹಾನಗಲ್ ಉಪಚುನಾವಣೆ ಸಂಬಂದ ನಾಲ್ಕು ದಿನಗಳ ಪ್ರಾಚಾರಕ್ಕೆ ತೆರಳುವುದಾಗಿ ತಿಳಿಸಿದ ಅವರು ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.