ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು | ‘ಶಿವಪದ ರತ್ನಕೋಶ’ ಗ್ರಂಥ ಬಿಡುಗಡೆ ಮಾಡಿದ ಸಿಎಂ ಬಿಎಸ್‌ವೈ

Last Updated 28 ಜುಲೈ 2020, 8:49 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ಜೆಎಸ್ಎಸ್ ಮಹಾವಿದ್ಯಾಪೀಠದ ಶಿವರಾತ್ರೀಶ್ವರ ಗ್ರಂಥಮಾಲೆ ಹೊರತಂದಿರುವ ‘ಶಿವಪದ ರತ್ನಕೋಶ’ ಗ್ರಂಥವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನಲ್ಲಿ ಮಂಗಳವಾರ ಬಿಡುಗಡೆ ಮಾಡಿದರು.

ನಂತರ ಮಾತನಾಡಿದ ಅವರು, ‘ಇದೊಂದು ಮಹತ್ವದ ಗ್ರಂಥ. ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ಅವರ ಗೌರವ ಸಂಪಾದಕತ್ವದಲ್ಲಿ, ಸಿದ್ದೇಶ್ವರ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಸಿದ್ಧವಾದ ಈ ಗ್ರಂಥವು ಸಾವಿರ ಪುಟಗಳ ಪದ ಭಂಡಾರ ಹೊಂದಿದೆ’ ಎಂದು ಶ್ಲಾಘಿಸಿದರು.

ಪುಸ್ತಕದ ಕಾರ್ಯನಿರ್ವಾಹಕ ಸಂಪಾದಕ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಂದೀಶ್ ಹಂಚೆ ಮಾತನಾಡಿ, ‘4,681 ವೀರಶೈವ ಮತ್ತು ಲಿಂಗಾಯತ ಪಾರಿಭಾಷಿಕ ಪದಗಳ ವಿವರಣೆ ಹೊಂದಿರುವ ಈ ಬೃಹತ್ ಗ್ರಂಥದ ರಚನಾಕಾರ್ಯವು 2013ರಲ್ಲಿ ಆರಂಭವಾಯಿತು. ಇದರಲ್ಲಿ ಮೂಲಪದದ ಅರ್ಥವಿವರಣೆಯ ಜತೆಗೆ ನಿಷ್ಪಕ್ತಿಯನ್ನೂ ನೀಡಲಾಗಿದೆ. ಕನ್ನಡ ಸಾರಸ್ವತ ಲೋಕದಲ್ಲಿ ಅತ್ಯಂತ ಅಪರೂಪದ ಕೃತಿ ಇದಾಗಿದೆ’ ಎಂದು ಹೇಳಿದರು.

ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ, ಸಚಿವರಾದ ಸಿಟಿ.ರವಿ, ಬಸವರಾಜ ಬೊಮ್ಮಾಯಿ, ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ, ತುಮಕೂರಿನ ಸಿದ್ಧಗಂಗಾಮಠದ ಸಿದ್ಧಲಿಂಗ ಸ್ವಾಮೀಜಿ, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ಆನ್‌ಲೈನ್‌ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮವನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ನೇರಪ್ರಸಾರ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT