‘ದೇವರಾಜ ಮಾರುಕಟ್ಟೆಯಲ್ಲಿ ಸಿ.ಎಂ ವಾಸ್ತವ್ಯ ಹೂಡಲಿ’

ಶುಕ್ರವಾರ, ಜೂನ್ 21, 2019
22 °C

‘ದೇವರಾಜ ಮಾರುಕಟ್ಟೆಯಲ್ಲಿ ಸಿ.ಎಂ ವಾಸ್ತವ್ಯ ಹೂಡಲಿ’

Published:
Updated:

ಮೈಸೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಮಾಡುವುದು ಒಳ್ಳೆಯ ವಿಚಾರ. ಆದರೆ ಅದರ ಜತೆಯಲ್ಲಿ ಮೈಸೂರನ್ನು ನೆನಪಿಸಿಕೊಂಡರೆ ಒಳ್ಳೆಯದಿತ್ತು ಎಂದು ಶಾಸಕ ಎಲ್‌.ನಾಗೇಂದ್ರ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ‘ಪಾರಂಪರಿಕ ನಗರಿ ಮೈಸೂರು ವಿಶ್ವದಲ್ಲೇ ಹೆಸರು ಮಾಡಿದೆ. ಆದರೆ ಇಲ್ಲಿನ ಹಲವು ಪಾರಂಪರಿಕ ಕಟ್ಟಡಗಳು ಸೂಕ್ತ ನಿರ್ವಹಣೆಯಿಲ್ಲದೆ ಕುಸಿದು ಬೀಳುತ್ತಿವೆ. ಇಂತಹ ಕಟ್ಟಡಗಳ ಸಂರಕ್ಷಣೆಯತ್ತ ಮುಖ್ಯಮಂತ್ರಿ ಗಮನ ಹರಿಸಲಿ. ಮೊದಲು ದೇವರಾಜ ಮಾರುಕಟ್ಟೆಯಲ್ಲಿ ವಾಸ್ತವ್ಯ ಮಾಡಲಿ. ನಾನೂ ಅವರ ಜತೆ ವಾಸ್ತವ್ಯ ಮಾಡುತ್ತೇನೆ’ ಎಂದರು.

ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಂಡ ಬಳಿಕ ಗ್ರಾಮ ವಾಸ್ತವ್ಯದ ನೆನಪಾಗಿದೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಮತದಾರರು ನೀಡಿದ ತೀರ್ಪಿನಿಂದ ಮುಖ್ಯಮಂತ್ರಿ ಕಂಗೆಟ್ಟಿದ್ದಾರೆ. ಆದ್ದರಿಂದ ಗ್ರಾಮ ವಾಸ್ತವ್ಯಕ್ಕೆ ಮುಂದಾಗಿದ್ದಾರೆ ಎಂದು ವ್ಯಂಗ್ಯವಾಡಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !