ಶನಿವಾರ, ಸೆಪ್ಟೆಂಬರ್ 25, 2021
22 °C

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಕ್ರಾಂತಿಕಾರಕ ಬದಲಾವಣೆ: ಅಶ್ವತ್ಥನಾರಾಯಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಸುಧಾರಣೆಗಳನ್ನು ತರಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.

ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಶಿಕ್ಷಣ ಅನುಷ್ಠಾನ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಇನ್ ಸ್ಟಿಟ್ಯೂಷನ್ ಡೆವಲೆಪ್ ಮೆಂಟ್ ಪ್ಲಾನ್ ನ್ನು ಗಂಭೀರವಾಗಿ ಪರಿಗಣಿಸಿ ಯೋಜನೆ ರೂಪಿಸಿ. ಖಾಸಗಿ ಕಾಲೇಜುಗಳೂ ಸರ್ಕಾರಿ ಕಾಲೇಜುಗಳನ್ನು ಅನುಸರಿಸುವಂತೆ ಮಾಡಬೇಕು ಎಂದು ಹೇಳಿದರು.

ವಿದ್ಯಾರ್ಥಿ ಕೇಂದ್ರೀತವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಇದೆ. ಇದನ್ನು ಹಂತಹಂತವಾಗಿ ಅನುಷ್ಠಾನ ಮಾಡುವ ಮೂಲಕ ಮುಂಬರುವ ದಿನಗಳಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ಮಾಡಲಾಗುವುದು ಎಂದು ತಿಳಿಸಿದರು.

ಈಗ ಕೇವಲ ಶೈಕ್ಷಣಿಕ ಸುಧಾರಣೆಗಳನ್ನು ಮಾತ್ರ ಕೈಗೆತ್ತಿಕೊಳ್ಳಲಾಗಿದೆ. ಮುಂದೆ ಆಡಳಿತಾತ್ಮಕವಾಗಿಯೂ ಸುಧಾರಣೆಗಳನ್ನು ತರಲಾಗುವುದು ಎಂದರು.

ಇದಕ್ಕೂ ಮುನ್ನ ಅವರು ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು