ಹೊಂದಾಣಿಕೆ ಕೊರತೆಯೇ ಸೋಲಿಗೆ ಕಾರಣ

ಸೋಮವಾರ, ಜೂನ್ 17, 2019
28 °C

ಹೊಂದಾಣಿಕೆ ಕೊರತೆಯೇ ಸೋಲಿಗೆ ಕಾರಣ

Published:
Updated:

ಹುಣಸೂರು: ‘ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗೆ ಜೆಡಿಎಸ್‌ ಸಂ‍ಪೂರ್ಣ ಸಹಕಾರ ನೀಡಿದೆ. ಆದರೂ ಸ್ಥಳೀಯ ಕಾಂಗ್ರೆಸ್‌ ಮುಖಂಡರ ಹೊಂದಾಣಿಕೆಯ ಕೊರತೆ ಅಭ್ಯರ್ಥಿಯ ಸೋಲಿಗೆ ಕಾರಣವಾಗಿದೆ’ ಎಂದು ಜೆಡಿಎಸ್‌ ತಾಲ್ಲೂಕು ಘಟಕದ ಅಧ್ಯಕ್ಷ ಮಾದೇಗೌಡ ಹೇಳಿದರು.

ಹುಣಸೂರಿನಲ್ಲಿ ಮೈತ್ರಿ ಅಭ್ಯರ್ಥಿಗೆ 3,798 ಮತಗಳು ಅಂತರ ನೀಡಲಾಗಿದೆ. ಕಾಂಗ್ರೆಸ್ ಮುಖಂಡರು ಜೆಡಿಎಸ್‌ ಶಾಸಕರನ್ನು ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರೇ ಇನ್ನೂ ಹೆಚ್ಚಿನ ಅಂತರ  ಪಡೆಯಬಹುದಿತ್ತು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜೆಡಿಎಸ್‌ ಮುಖಂಡ ಹರಿಹರ ಆನಂದಸ್ವಾಮಿ ಮಾತನಾಡಿ, ‘ಈ ಬಾರಿ ಯುವಕರು ಮೋದಿ ಮೋಹಕ್ಕೆ ಒಲವು ತೋರಿ ಜಾತ್ಯಾತೀತವಾಗಿ ಬೆಂಬಲಿದ್ದಾರೆ. ಆದ್ದರಿಂದ ಮೈತ್ರಿ ಅಭ್ಯರ್ಥಿಗೆ ಹಿನ್ನಡೆಯಾಗಿದೆ. ಇದನ್ನರಿತು ಪ್ರಧಾನಿ ನರೇಂದ್ರ ಮೋದಿ ಅವರು ಯುವ ಸಮೂಹಕ್ಕೆ ಉದ್ಯೋಗವಕಾಶವನ್ನು ಕಲ್ಪಿಸಬೇಕಿದೆ’ ಎಂದರು.

ಸುದ್ದಿಗೋಷ್ಠಿಯಲ್ಲಿ ನಗರಸಭೆ ಮಾಜಿ ಸದಸ್ಯ ಸತೀಶ್‌ ಕುಮಾರ್‌, ಕುರುಬ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಕುನ್ನೇಗೌಡ ಇದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !