ಸೋಮವಾರ, ಮೇ 23, 2022
21 °C

ಆದಿಚುಂಚನಗಿರಿ ಸ್ವಾಮೀಜಿ ನಿರ್ಧಾರಕ್ಕೆ ಬದ್ಧ: ಮಂಜು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ‘ಒಕ್ಕಲಿಗರಿಗೆ ಪ್ರಸ್ತುತ ಮೀಸಲಾತಿಯಲ್ಲಿ ಶೇ 4ರಷ್ಟು ಮಾತ್ರ ಸಿಗುತ್ತಿದೆ. ಇದನ್ನು ಶೇ 15ಕ್ಕೆ ಹೆಚ್ಚಿಸಬೇಕು ಎಂಬುದು ಸಮುದಾಯದ ಬೇಡಿಕೆಯಾಗಿದೆ’ ಎಂದು ಮೈಸೂರು–ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಜಿ.ಮಂಜು ಸೋಮವಾರ ಇಲ್ಲಿ ತಿಳಿಸಿದರು.

‘ಮೈಸೂರು, ಬೆಂಗಳೂರು, ಹಾಸನ, ಮಂಡ್ಯ ಸೇರಿದಂತೆ ರಾಜ್ಯದ 12 ಜಿಲ್ಲೆಗಳಲ್ಲಿ ಒಕ್ಕಲಿಗರು ಬಲಾಢ್ಯರಾಗಿದ್ದೇವೆ. ಜನಸಂಖ್ಯೆಗನುಗುಣವಾಗಿ ಪ್ರಾತಿನಿಧ್ಯ ಕೇಳುತ್ತಿದ್ದೇವೆ. ಸರ್ಕಾರ ಸ್ಪಂದಿಸದಿದ್ದರೇ ಹೋರಾಟ ಅನಿವಾರ್ಯ’ ಎಂದು ತಮ್ಮನ್ನು ಭೇಟಿಯಾದ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು.

ಪ್ರತ್ಯೇಕ ರಾಜ್ಯದ ಹಕ್ಕೊತ್ತಾಯಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ, ‘ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಸಂಘ, ಸಮಾಜ ಬದ್ಧವಾಗಿರುತ್ತೆ’ ಎಂದು ಮಂಜು ತಿಳಿಸಿದರು.

‘ಸಂವಿಧಾನಿಕವಾಗಿ ಮೀಸಲಾತಿ ಹೆಚ್ಚಿಸುವ ಬಗ್ಗೆಯಷ್ಟೇ ಮೈಸೂರಿನ ಒಕ್ಕಲಿಗ ಸಮುದಾಯ ಭವನದಲ್ಲಿ ಭಾನುವಾರ ಸಭೆ ನಡೆಸಲಾಯಿತು. ನಮ್ಮ ಒತ್ತಾಯ ಮೀಸಲಾತಿ ಹೆಚ್ಚಳದ ಬಗ್ಗೆಯಷ್ಟೇ. ಉಳಿದಂತಹ ಮಹತ್ವದ ನಿರ್ಧಾರಗಳನ್ನು ನಿರ್ಮಲಾನಂದನಾಥ ಸ್ವಾಮೀಜಿ ತೆಗೆದುಕೊಳ್ಳಲಿದ್ದಾರೆ’ ಎಂದು ಅವರು
ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು