ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕವಲಂದೆ ಬೋಲೆ ತೋ ಛೋಟಾ ಪಾಕಿಸ್ತಾನ್’; ವಿಡಿಯೊ ವೈರಲ್– ಮುತಾಲಿಕ್ ಖಂಡನೆ

Last Updated 5 ಮೇ 2022, 10:32 IST
ಅಕ್ಷರ ಗಾತ್ರ

ಮೈಸೂರು: ‘ಕವಲಂದೆ ಬೋಲೆ ತೋ ಛೋಟಾ ಪಾಕಿಸ್ತಾನ್’ (ಕವಲಂದೆ ಚಿಕ್ಕ ಪಾಕಿಸ್ತಾನ) ಎನ್ನುವ ಹಿನ್ನೆಲೆ ಧ್ವನಿ ಇರುವ ವಿಡಿಯೊವೊಂದು ಗುರುವಾರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಈದ್‌ ಉಲ್‌ ಫಿತ್ರ್‌ ಹಬ್ಬದಂದು ನಂಜನಗೂಡು ತಾಲೂಕಿನಕವಲಂದೆಯಲ್ಲಿ ಪ್ರಾರ್ಥನೆ ಸಲ್ಲಿಸಿ ನೂರಾರು ಸಂಖ್ಯೆಯಲ್ಲಿ ಮುಸ್ಲಿಮರು ಹೊರಟಿರುವ ದೃಶ್ಯಕ್ಕೆ ವ್ಯಕ್ತಿಯೊಬ್ಬ ಹಿನ್ನೆಲೆಯಲ್ಲಿ ‘ಕವಲಂದೆ ಬೋಲೆ ತೋ ಛೋಟಾ ಪಾಕಿಸ್ತಾನ್’ ಎಂದು ಹೇಳುತ್ತಾನೆ. 30 ಸೆಕೆಂಡ್‌ಗಳ ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದೆ.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್, ‘ವಿಡಿಯೊ ವೈರಲ್ ಆಗಿರುವುದು ಗಮನಕ್ಕೆ ಬಂದಿದೆ. ಈ ಕುರಿತು ತನಿಖೆ ನಡೆಸಲಾಗುವುದು’ ಎಂದರು.

‘ಈದ್‌ ಉಲ್‌ ಫಿತ್ರ್‌ ದಿನ ಮೆರವಣಿಗೆಯಲ್ಲಿ ಹೊರಟ ಮುಸ್ಲಿಮರು ಈ ಘೋಷಣೆ ಕೂಗಿಲ್ಲ. ಠಾಣೆಯ ಮುಂಭಾಗ ಇರುವ ದರ್ಗಾದ ಸಮೀಪ ಪ್ರಾರ್ಥನೆ ಮಾಡಿ ಅವರೇ ಮನೆಗೆ ಹೊರಡಿ ಎಂದು ಎಲ್ಲರನ್ನೂ ಕಳುಹಿಸುತ್ತಾರೆ. ಆದರೆ, ವ್ಯಕ್ತಿಯೊಬ್ಬ ವಿಡಿಯೊಕ್ಕೆ ಈ ರೀತಿ ಧ್ವನಿ ನೀಡಿದ್ದಾನೆ. ಈ ಕುರಿತು ಪರಿಶೀಲಿಸಲಾಗುತ್ತಿದೆ’ ಎಂದು ಕವಲಂದೆ ಪೊಲೀಸರು ತಿಳಿಸಿದರು.

ಮುತಾಲಿಕ್ ಖಂಡನೆ

ಬೆಳಗಾವಿ: ಮೈಸೂರು‌ ಜಿಲ್ಲೆನಂಜನಗೂಡು ತಾಲ್ಲೂಕಿನ ಕವಲಂದೆ ಗ್ರಾಮದಲ್ಲಿ ಪಾಕ್ ಪರವಾಗಿ ಘೋಷಣೆಗಳನ್ನು ಕೂಗಿರುವವರು ದೇಶದ್ರೋಹಿಗಳು. ಆ ದೇಶದ ಮೇಲೆ ಪ್ರೀತಿ ಇದ್ದವರು ಅಲ್ಲಿಗೆ ಹೋಗಲಿ. ಸರ್ಕಾರವು ಇಂಥ ದೇಶದ್ರೋಹಿಗಳ ವಿರುದ್ಧ ಕಠಿಣ ಕ್ರಮ‌ ಕೈಗೊಳ್ಳಬೇಕು. ಇಲ್ಲದಿದ್ದರೆ ಕವಲಂದೆ ಚಲೋ ಚಳವಳಿ ನಡೆಸಬೇಕಾಗುತ್ತದೆ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದರು.ಇಲ್ಲಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, 'ನೀಚರು, ನಿರ್ಲಜ್ಜರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ. ಆರೋಪಿಗಳನ್ನು ಕೂಡಲೇ ಬಂಧಿಸಬೇಕು' ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT