ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಸಂಸದ ಪ್ರತಾಪ ಸಿಂಹ ವಿರುದ್ಧ ಜಿಲ್ಲಾಧಿಕಾರಿಗೆ ದೂರು

Last Updated 14 ಸೆಪ್ಟೆಂಬರ್ 2021, 9:35 IST
ಅಕ್ಷರ ಗಾತ್ರ

ಮೈಸೂರು: ಸಂಸದ ಪ್ರತಾಪ ಸಿಂಹ ಅವರು ಈಚೆಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೋಮುಗಲಭೆ ಸೃಷ್ಟಿಸುವಂತಹ ಹೇಳಿಕೆ ನೀಡಿದ್ದು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕೋರಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ಜಿಲ್ಲಾಧಿಕಾರಿಗೆ ದೂರು ನೀಡಿದೆ.

ಈ ಸಂಬಂಧ ಪಕ್ಷದ ಮುಖಂಡರ ನಿಯೋಗವು ಮಂಗಳವಾರ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿತು. ನಂತರ, ಮನವಿ ಪತ್ರ ಸಲ್ಲಿಸಿತು.

‘ದೇವರಾಜ ಅರಸು ರಸ್ತೆಯಲ್ಲಿರುವ ದರ್ಗಾ ಹಾಗೂ ಇರ್ವಿನ್ ರಸ್ತೆಯಲ್ಲಿರುವ ಮಸೀದಿಯನ್ನು ಒಡೆದು ಹಾಕಬೇಕು ಎಂದು ಜಿಲ್ಲಾಧಿಕಾರಿಯವರಿಗೆ ಸಭೆಯಲ್ಲಿ ಧಮ್ಕಿ ಹಾಕಿದ್ದರು. ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸಮ್ಮುಖದಲ್ಲೇ ಧಾರ್ಮಿಕ ಭಾವನೆಗಳನ್ನು ಕೆರಳಿಸಿ, ಸಮುದಾಯಗಳ ನಡುವೆ ಕಿಚ್ಚು ಹಚ್ಚಿಸುವಂತಹ ಹೇಳಿಕೆ ನೀಡಿರುವುದನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಬಿ.ಜೆ.ವಿಜಯಕುಮಾರ್ ಆಗ್ರಹಿಸಿದರು.

‘ಮುಸ್ಲಿಂ ಸಮುದಾಯದ ವಿರುದ್ಧ ಕ್ರಮ ಜರುಗಿಸಲು ಜಿಲ್ಲಾಧಿಕಾರಿಯ ತೊಡೆ ನಡುಗುತ್ತದೆಯೇ, ಮಸೀದಿಗಳನ್ನು ಒಡೆದು ಹಾಕದಿದ್ದರೆ ನಾನೇ ನಿಂತು ಒಡೆಯಬೇಕಾಗುತ್ತದೆ ಎಂದು ಹೇಳುವ ಮೂಲಕ ಪ್ರತಾಪಸಿಂಹ ಕಾನೂನನ್ನೇ ಕೈಗೆತ್ತಿಕೊಳ್ಳಲು ಹೊರಟಿದ್ದಾರೆ’ ಎಂದು ಆರೋಪಿಸಿದರು.

ಒಂದು ವೇಳೆ ಪ್ರತಾಪ ಸಿಂಹ ವಿರುದ್ಧ ಕಾನೂನು ಕ್ರಮ ಜರುಗಿಸದೇ ಹೋದರೆ ಮುಂದೆ ಕೋಮುಗಲಭೆ ಸಂಭವಿಸಿದರೆ ಅದಕ್ಕೆ ಜಿಲ್ಲಾಡಳಿತವೇ ಹೊಣೆ ಹೊರಬೇಕಾಗುತ್ತದೆ ಎಂದೂ ಅವರು ಎಚ್ಚರಿಕೆ ನೀಡಿದರು.

ಕಾಂಗ್ರೆಸ್‌ ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ, ಕೆಪಿಸಿಸಿ ವಕ್ತಾರರಾದ ಎಂ.ಲಕ್ಷ್ಮಣ, ಮಂಜುಳಾ ಮಾನಸ, ವೆಂಕಟೇಶ್, ಮುಖಂಡ ಎಂ.ಕೆ.ಸೋಮಶೇಖರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT