ಶನಿವಾರ, ಮಾರ್ಚ್ 25, 2023
22 °C
ಪುನೀತ್ ರಾಜ್‍ಕುಮಾರ್ ಎಲ್ಲ ಗೌರವಕ್ಕೆ ಅರ್ಹರು

ಪುನೀತ್‌ಗೆ ಪದ್ಮಶ್ರೀ ಪ್ರಶಸ್ತಿ ನೀಡಲು ಸರ್ವ ಸಮ್ಮತ ಒಪ್ಪಿಗೆ ಇದೆ: ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ನಟ ಪುನೀತ್ ರಾಜ್‍ಕುಮಾರ್ ಪದ್ಮಶ್ರೀ ಸೇರಿದಂತೆ ಎಲ್ಲ ಗೌರವಕ್ಕೆ ಅರ್ಹರು. ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲು ಸರ್ವ ಸಮ್ಮತ ಒಪ್ಪಿಗೆ ಇದೆ. ಆದರೆ ನಿಯಮಗಳನ್ನು ಪರಿಶೀಲನೆ ಮಾಡಿ ನಂತರ ಪ್ರಸ್ತಾವ ಸಿದ್ದಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಮಗೂ ಪುನೀತ್ ರಾಜ್ ಕುಮಾರ್ ಬಗ್ಗೆ ಅಪಾರ ಗೌರವ ಇದೆ. ಎಲ್ಲವನ್ನು ಪರಿಶೀಲನೆ ಮಾಡುತ್ತೇವೆ ಎಂದರು.

ಎಚ್ ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದ ಬಳಿಯಿರುವ ಕಬಿನಿ ಜಲಾಶಯಕ್ಕೆ ಅವರು ಬಾಗಿನ ಸಲ್ಲಿಸಿದರು.

ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲುವು ಸಾಧಿಸುತ್ತದೆ ಎಂದು‌ ವಿಶ್ವಾಸ ವ್ಯಕ್ತಪಡಿಸಿದರು.

ಬಾಗಿನ ಅರ್ಪಿಸುವ ಅಂಗಳಕ್ಕೆ ನುಗ್ಗಲು ಯತ್ನ
ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯ ಕಬಿನಿ ಜಲಾಶಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಿಸುವ ಅಂಗಳಕ್ಕೆ ಬಿಜೆಪಿಯ ಎಚ್‌.ಡಿ.ಕೋಟೆ ತಾಲ್ಲೂಕಿನ ಅಧ್ಯಕ್ಷ ಗುರುಸ್ವಾಮಿ ನುಗ್ಗಲು ಯತ್ನಿಸಿದರು.

ಈ ಸಂದರ್ಭ ಅವರನ್ನು ತಡೆದ ಪೊಲೀಸರು ಅತಿಥಿಗೃಹದಲ್ಲಿ ಭೇಟಿ ಮಾಡುವಂತೆ ಸೂಚಿಸಿದರು. ಹೀಗಾಗಿ, ಬಿಜೆಪಿ ಮುಖಂಡರಿಗೇ ಅವಕಾಶ ನೀಡಿಲ್ಲ ಎಂದು ಗುರುಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು