ಪದಗ್ರಹಣ: ಪೂರ್ವಭಾವಿ ಸಭೆಯಲ್ಲಿ ಗದ್ದಲ

7

ಪದಗ್ರಹಣ: ಪೂರ್ವಭಾವಿ ಸಭೆಯಲ್ಲಿ ಗದ್ದಲ

Published:
Updated:

ಮೈಸೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮಕ್ಕೆ ಭಾಗವಹಿಸುವ ಹಿನ್ನೆಲೆಯಲ್ಲಿ ಸೋಮವಾರ ನಗರದಲ್ಲಿ ನಡೆದ ಕಾಂಗ್ರೆಸ್‌ ಜಿಲ್ಲಾಮಟ್ಟದ ಪೂರ್ವಭಾವಿ ಸಭೆ ಗದ್ದಲದಿಂದ ಮುಕ್ತಾಯವಾಯಿತು.

ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್‌ ಗುಂಡೂರಾವ್‌, ಕಾರ್ಯಾಧ್ಯಕ್ಷರಾಗಿ ಈಶ್ವರ್‌ ಖಂಡ್ರೆ ಪದಗ್ರಹಣ ಕಾರ್ಯಕ್ರಮಕ್ಕೆ ಕಾರ್ಯಕರ್ತರು ಭಾಗವಹಿಸಲು ಸಿದ್ಧತೆ ನಡೆಸಿಕೊಳ್ಳಲು ಸಭೆ ಹಮ್ಮಿಕೊಳ್ಳಲಾಗಿತ್ತು. ಆದರೆ, ಚುನಾವಣೆಗೂ ಮುನ್ನ ಪಕ್ಷವು ಹಲವು ಕ್ಷೇತ್ರಗಳಲ್ಲಿ ಸೋಲಲು ಕಾರಣರಾದವರ ವಿರುದ್ಧ ಕ್ರಮ ತೆಗೆದುಕೊಂಡಿಲ್ಲ ಎಂದು ಕಾರ್ಯಕರ್ತರು ತರಾಟೆ ತೆಗೆದುಕೊಂಡರು.

ಸಭೆ ಆರಂಭವಾಗುತ್ತಲೇ ಎದ್ದುನಿಂತ ನಗರಪಾಲಿಕೆ ಸದಸ್ಯ ಪಿ.ಪ್ರಶಾಂತ್‌, ಕಾಂಗ್ರೆಸ್‌ ಕೆಲವಡೆ ಸೋಲಲು ಬ್ಲಾಕ್‌ ಅಧ್ಯಕ್ಷರೇ ಕಾರಣ ಎಂದು ನೇರ ಆರೋಪ ಮಾಡಿದರು. ಈ ಕುರಿತು ಈಗಾಗಲೇ ಆರೋಪ ಮಾಡಿದ್ದರೂ ಕ್ರಮ ತೆಗೆದುಕೊಂಡಿಲ್ಲ. ಅದರಲ್ಲೂ ಚಾಮುಂಡೇಶ್ವರಿ ಹಾಗೂ ಚಾಮರಾಜ ಕ್ಷೇತ್ರಗಳಲ್ಲಿ ಸೋಲಲು ಕೆಲವು ಮುಖಂಡರು ಒಳಸಂಚು ನಡೆಸಿರುವುದೇ ಕಾರಣ ಎಂದು ಕಿಡಿಕಾರಿದರು.

ಕೆಲವು ನಗರಪಾಲಿಕೆ ಸದಸ್ಯರು, ಪ್ರಾಧಿಕಾರವೊಂದರ ಮಾಜಿ ಅಧ್ಯಕ್ಷರು ಪಕ್ಷ ವಿರೋಧಿ ಕೆಲಸ ಮಾಡಿದ್ದಾರೆ. ಅಂಥವರನ್ನು ಪಕ್ಷದಿಂದ ಉಚ್ಛಾಟಿಸಬೇಕು. ಇಲ್ಲವಾದಲ್ಲಿ ಪಕ್ಷಕ್ಕೆ ಜಿಲ್ಲೆಯಲ್ಲಿ ತೊಂದರೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಕಾರ್ಯಕರ್ತರನ್ನು ನಿಯಂತ್ರಿಸಲು ಯತ್ನಿಸಿದ ಜಿಲ್ಲಾಧ್ಯಕ್ಷ ಡಾ.ಬಿ.ಕೆ.ವಿಜಯಕುಮಾರ್‌ ಹಾಗೂ ನಗರಾಧ್ಯಕ್ಷ ಆರ್‌.ಮೂರ್ತಿ ಪ್ರಯತ್ನಿಸಿ, ಸಭೆಯಿಂದ ಹೊರ ನಡೆದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !