ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಕ್ಷ ವಿರೋಧಿ ಚಟುವಟಿಕೆ– ಕಾಂಗ್ರೆಸ್‌ನ ಮುಖಂಡರ ಉಚ್ಚಾಟನೆ

Last Updated 24 ಡಿಸೆಂಬರ್ 2018, 20:24 IST
ಅಕ್ಷರ ಗಾತ್ರ

ಮೈಸೂರು: ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಆರೋಪದ ಮೇಲೆ ನಂಜನಗೂಡು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸೇರಿದಂತೆ ಜಿಲ್ಲೆಯ ಏಳು ಮುಖಂಡರನ್ನು ಕಾಂಗ್ರೆಸ್‌ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಂ.ಸುಧೀರ್‌ (ತಿ.ನರಸೀಪುರ), ಮಧು ಸುಬ್ಬಣ್ಣ (ಕಳಲೆ), ನಂಜನಗೂಡು ತಾ.ಪಂ ಅಧ್ಯಕ್ಷ ಬಿ.ಎಸ್‌.ಮಹದೇವಪ್ಪ, ಸದಸ್ಯರಾದ ಶಿವಣ್ಣ, ಗೀತಾ, ಎಸ್‌.ದೇವಮ್ಮ, ಮಾದಪ್ಪ ಅವರ ಮೇಲೆ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಈ ಕ್ರಮ ಕೈಗೊಂಡಿದೆ.

ಜಿಲ್ಲಾ ಕಾಂಗ್ರೆಸ್‌ ಸಮಿತಿ ಮಾಡಿದ ಶಿಫಾರಸಿನ ಮೇರೆಗೆ ಈ ಸದಸ್ಯರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.

‘ನಂಜನಗೂಡು ಉಪಚುನಾವಣೆಯಲ್ಲಿ ಈ ಸದಸ್ಯರು ಬಿಜೆಪಿ ಮುಖಂಡ ವಿ.ಶ್ರೀನಿವಾಸಪ್ರಸಾದ್‌ ಜೊತೆ ಗುರುತಿಸಿಕೊಂಡಿದ್ದರು. ಈ ಸಂಬಂಧ ನಾನು ಕೆಪಿಸಿಸಿಗೆ ವರದಿ ನೀಡಿದ್ದೆ’ ಎಂದು ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಬಿ.ಜೆ.ವಿಜಯಕುಮಾರ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT