ಮೈಸೂರು: ‘ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸುತ್ತಿರುವ ಕಾಂಗ್ರೆಸ್‌ಗೆ
ಸ್ವದೇಶಿ ಚಿಂತನೆ ಎಂಬುದೇ ಇಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಭಾನುವಾರ ಇಲ್ಲಿ ವಾಗ್ದಾಳಿ
ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ‘ದೇಶದ ಇತಿಹಾಸವನ್ನು ಕಾಂಗ್ರೆಸ್ ತಿರುಚಿದೆ. ಮೆಕಾಲೆಯ ಶಿಕ್ಷಣ ಪದ್ಧತಿಯನ್ನು ಮುಂದುವರಿಸಿದ ಪರಿಣಾಮ ಸ್ವಾಭಿಮಾನದ ದೇಶ ಕಟ್ಟಲು ಕಾಂಗ್ರೆಸ್‌ಗೆ ಆಗಲಿಲ್ಲ. ವಿದೇಶಿ ಚಿಂತನೆಯಲ್ಲೇ ಬೆಳೆದು
ಬಂದ ಆ ಪಕ್ಷಕ್ಕೆ ಮಾನಸಿಕವಾಗಿ ಸ್ವದೇಶಿ ಚಿಂತನೆ ಇಲ್ಲ’
ಎಂದರು.
‘ದೇಶದ ಒಳಿತಿಗೆ ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡ ಎಲ್ಲಾ ನೀತಿಗಳನ್ನು ವಿರೋಧಿಸುವುದೇ ಕಾಂಗ್ರೆಸ್‌ನ ಕೆಲಸವಾಗಿದೆ. ಸರ್ಜಿಕಲ್ ಸ್ಟ್ರೈಕ್ ಅನ್ನೇ ಪ್ರಶ್ನಿಸಿದೆ. ಚೀನಾದ ಆಕ್ರಮಣ ಆದಾಗಲೂ ಕೇಂದ್ರ ಸರ್ಕಾರವನ್ನು ಬೆಂಬಲಿಸಲಿಲ್ಲ’ ಎಂದು ದೂರಿದರು.
‘ಹಿಂದಿನ ಸರ್ಕಾರಗಳು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿವೆ. ಮೋದಿ ಸರ್ಕಾರ ಬೆಲೆ ಏರಿಕೆಯನ್ನು ನಿಯಂತ್ರಿಸುತ್ತಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.