ಬುಧವಾರ, ಸೆಪ್ಟೆಂಬರ್ 22, 2021
24 °C

31 ರಂದು ಕಾಂಗ್ರೆಸ್‌ ಸಭೆ: ಮೈಸೂರು ಸೇರಿದಂತೆ ಐದು ಜಿಲ್ಲೆಗಳ ಮುಖಂಡರು ಭಾಗಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ‘ಪಕ್ಷ ಸಂಘಟನೆಯ ಉದ್ದೇಶದಿಂದ ಜುಲೈ 31 ರಂದು ಮೈಸೂರಿನಲ್ಲಿ ಐದು ಜಿಲ್ಲೆಗಳ ಕಾಂಗ್ರೆಸ್‌ ಮುಖಂಡರ ಸಭೆ ನಡೆಯಲಿದ್ದು, ಕೆಪಿಸಿಸಿ ಉಸ್ತುವಾರಿಯೂ ಆಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಪಾಲ್ಗೊಳ್ಳಲಿದ್ದಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌.ಧ್ರುವನಾರಾಯಣ ತಿಳಿಸಿದರು.

ಮೈಸೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಸೈಲೆಂಟ್‌ ಶೋರ್ಸ್‌ ರೆಸಾರ್ಟ್‌ನಲ್ಲಿ ಬೆಳಿಗ್ಗೆ 9.30 ರಿಂದ ಸಭೆ ನಡೆಯಲಿದೆ. ಮೈಸೂರು, ಚಾಮರಾಜನಗರ, ಕೊಡಗು, ಹಾಸನ ಮತ್ತು ಮಂಡ್ಯ ಜಿಲ್ಲೆಗಳ ಮುಖಂಡರು ಭಾಗವಹಿಸಲಿದ್ದಾರೆ. ರಾಜ್ಯದಾದ್ಯಂತ ಪಕ್ಷ ಸಂಘಟನೆಯ ಉದ್ದೇಶದಿಂದ ಸಭೆ ಆಯೋಜಿಸಲಾಗುತ್ತಿದ್ದು, ಇಂತಹ ಸಭೆ ತುಮಕೂರಿನಲ್ಲಿ ಈಗಾಗಲೇ ನಡೆದಿದೆ. ಜುಲೈ 30 ರಂದು ಹುಬ್ಬಳ್ಳಿಯಲ್ಲಿ ಆಯೋಜನೆಯಾಗಿದೆ’ ಎಂದರು.

‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ, ಕೆಪಿಸಿಸಿಯ ಎಲ್ಲ ಕಾರ್ಯಾಧ್ಯಕ್ಷರು ಮತ್ತು ಮೈಸೂರು ಭಾಗದ ಐದು ಜಿಲ್ಲೆಗಳ ಕಾಂಗ್ರೆಸ್‌ ಶಾಸಕರು, ಮಾಜಿ ಶಾಸಕರು, ಕಳೆದ ಚುನಾವಣೆಯಲ್ಲಿ ಪರಾಜಿತರಾದವರು ಭಾಗವಹಿಸುವರು. ಈ ಸಭೆಗೆ ಆಹ್ವಾನಿತರಿಗೆ ಮಾತ್ರ ಅವಕಾಶವಿದೆ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.