ಬುಧವಾರ, ಮಾರ್ಚ್ 29, 2023
32 °C

ಸಿದ್ದರಾಮಯ್ಯ ತೇಜೋವಧೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ಮೈಸೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುತ್ತಿರುವ ಬಿಜೆಪಿಯ ಧೋರಣೆ ಖಂಡಿಸಿ ಮೈಸೂರು ನಗರ ಮತ್ತು ಜಿಲ್ಲಾ ಕಾಂಗ್ರೆಸ್‌ ನಗರದಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಸಿತು.

ಪುರಭವನ ಮುಂಭಾಗದ ಅಂಬೇಡ್ಕರ್‌ ಪ್ರತಿಮೆ ಬಳಿ ನೆರೆದ ಪ್ರತಿಭಟನಕಾರರು ಬಿಜೆಪಿಯ ಕುತಂತ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

‘ದಲಿತ ಮುಖಂಡರು ಸ್ವಾರ್ಥಕ್ಕಾಗಿ ಬಿಜೆಪಿ ಸೇರಿದ್ದಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ತಿರುಚಿ ದಲಿತರಿಗೆ ಅಗೌರವ ತೋರಿದ್ದಾರೆ ಎಂದು ಬಿಂಬಿಸಲಾಗುತ್ತಿದೆ. ದಲಿತರ ನಡುವೆ ಒಡಕು ಮೂಡಿಸುವ ಹುನ್ನಾರ ಇದರ ಹಿಂದೆ ಇದೆ’ ಎಂದು ಪ್ರತಿಭಟನಕಾರರು ದೂರಿದರು.

’ಸಿದ್ದರಾಮಯ್ಯ ಅವರಿಗೆ ದಲಿತರ ಬಗ್ಗೆ ಅಪಾರ ಗೌರವ ಇದೆ. ಅವರ ಏಳಿಗೆಗಾಗಿ ಸಾಕಷ್ಟು ಯೋಜನೆಗಳನ್ನೂ ಜಾರಿಗೆ ತಂದಿದ್ದಾರೆ. ಸುಳ್ಳು ಆರೋಪಗಳನ್ನು ಮಾಡುವುದನ್ನು ಬಿಡಬೇಕು’ ಎಂದು ಒತ್ತಾಯಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌.ಧ್ರುವನಾರಾಯಣ, ಮುಖಂಡರಾದ ಕಳಲೆ ಕೇಶವಮೂರ್ತಿ, ಎಂ.ಕೆ.ಸೋಮಶೇಖರ್‌, ವಾಸು, ಮಂಜುಳಾ ಮಾನಸ, ಕಾಂಗ್ರೆಸ್‌ ನಗರ ಘಟಕದ ಅಧ್ಯಕ್ಷ ಆರ್‌.ಮೂರ್ತಿ, ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್‌ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು