ಭಾನುವಾರ, ಜನವರಿ 24, 2021
16 °C

ರೈತರಿಗೆ ಬೆಂಬಲ: ಕಾಂಗ್ರೆಸ್‌ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ನವದೆಹಲಿಯ ಹೊರ ವಲಯದಲ್ಲಿ ರೈತ ಸಮುದಾಯ ನಡೆಸಿರುವ ಹೋರಾಟಕ್ಕೆ ಬೆಂಬಲ ಘೋಷಿಸಿದ ಮೈಸೂರು ನಗರ/ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಘಟಕ, ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗ ಭಾನುವಾರ ರಾತ್ರಿ ಧರಣಿ ನಡೆಸಿತು.

‘ಉಳುವ ಯೋಗಿಯ ನೋಡಲ್ಲಿ’ ಎಂಬ ರೈತ ಗೀತೆ ಹಾಡುವ ಮೂಲಕ ಧರಣಿಗೆ ಕಾಂಗ್ರೆಸ್‌ ಮುಖಂಡರು ಚಾಲನೆ ನೀಡಿದರು. ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಂಜೆ 7ಕ್ಕೆ ಆರಂಭವಾದ ಧರಣಿ ರಾತ್ರಿ 9ರವರೆಗೂ ನಡೆಯಿತು.

ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಮಾತನಾಡಿ, ‘ಬಿಜೆಪಿ ಹಳ್ಳಿಗರು, ಕೃಷಿ ಪರವಾದ ಪಕ್ಷ ಎಂಬ ಉಲ್ಲೇಖ ಎಲ್ಲೂ ಇಲ್ಲ. ಇದೊಂದು ವ್ಯಾಪಾರಸ್ಥರ ಪಕ್ಷವಾಗಿದೆ. ರೈತರ ಉತ್ಪಾದನೆಯನ್ನು ದ್ವಿಗುಣಗೊಳಿಸುತ್ತೀನಿ ಎಂದು ಪ್ರಧಾನಿ ನರೇಂದ್ರ ಮೋದಿ ಎಲ್ಲೂ ಹೇಳಿಲ್ಲ. ಯಾವ ರೈತರು ಅದರ ಫಲ ಪಡೆದಿಲ್ಲ. ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ಮಧ್ಯಪ್ರದೇಶ ಇತರ ರಾಜ್ಯಗಳಲ್ಲೂ ರೈತರು ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ನಿರಂತರ ಹೋರಾಟ ನಡೆಸುತ್ತಿದ್ದಾರೆ’ ಎಂದು ಹೇಳಿದರು.

ಮಾಜಿ ಶಾಸಕ ವಾಸು ಸೇರಿದಂತೆ ಮತ್ತಿತರ ಮುಖಂಡರು ಮಾತನಾಡಿದರು. ಮಾಜಿ ಸಂಸದ ಆರ್.ಧ್ರುವನಾರಾಯಣ, ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್, ಕಳಲೆ ಎನ್.ಕೇಶವಮೂರ್ತಿ, ನಗರಾಧ್ಯಕ್ಷ ಆರ್.ಮೂರ್ತಿ, ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು