ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಗಿ ಸರ್ಕಾರ ವಜಾಕ್ಕೆ ಕಾಂಗ್ರೆಸ್‌ ಆಗ್ರಹ

ಬಿಜೆಪಿಯಿಂದ ಕಾಂಗ್ರೆಸ್‌ ಬೆಂಬಲಿಗರ ಟಾರ್ಗೆಟ್‌: ಡಾ.ಬಿ.ಜೆ.ವಿಜಯಕುಮಾರ್‌ ಆರೋಪ
Last Updated 20 ಜುಲೈ 2019, 14:37 IST
ಅಕ್ಷರ ಗಾತ್ರ

ಮೈಸೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಬಂಧನ ಖಂಡಿಸಿ ಹಾಗೂ ರಾಜ್ಯಪಾಲ ವಜುಭಾಯಿ ವಾಲಾ ನಡೆ ವಿರೋಧಿಸಿ ಕಾಂಗ್ರೆಸ್‌ ಮುಖಂಡರು ಶನಿವಾರ ನಗರದ ಗಾಂಧಿವೃತ್ತದಲ್ಲಿ ಪ್ರತಿಭಟಿಸಿದರು.

‘ತೊಲಗಿಸಿ, ತೊಲಗಿಸಿ ಬಿಜೆಪಿ ಸರ್ಕಾರ ತೊಲಗಿಸಿ. ವಜಾಗೊಳಿಸಿ, ವಜಾಗೊಳಿಸಿ ಯುಪಿ ಸರ್ಕಾರ ವಜಾಗೊಳಿಸಿ, ದಲಿತ ವಿರೋಧಿ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ’ ಎಂಬ ಘೋಷಣೆಗಳನ್ನು ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ಸಂದರ್ಭ ಮೊಳಗಿಸಿದರು.

ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಮಾತನಾಡಿ, ‘ಕಾಂಗ್ರೆಸ್‌ ಬೆಂಬಲಿತ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರು ಹಾಗೂ ಬುಡಕಟ್ಟು ಸಮಾಜದವರನ್ನು ಟಾರ್ಗೆಟ್‌ ಮಾಡಿ ಕೊಲ್ಲಲಾಗುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಗೊಂಡಾ ಬುಡಕಟ್ಟು ಸಮುದಾಯ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ ಬೆಂಬಲಿಸಿದ್ದಕ್ಕೆ, ಹಳ್ಳಿಗೆ ನುಗ್ಗಿ ಗುಂಡಿಟ್ಟು ಕೊಲ್ಲಲಾಗಿದೆ. ಇಂತಹ ಪೈಶಾಚಿಕ ಕೃತ್ಯ ಈಚೆಗಿನ ದಿನಗಳಲ್ಲಿ ದೇಶದಲ್ಲಿ ನಡೆದಿದ್ದು ಇದೇ ಪ್ರಥಮ’ ಎಂದು ಕಿಡಿಕಾರಿದರು.

‘ರಾಜ್ಯದಲ್ಲಿ ಪ್ರಜಾಪ್ರಭುತ್ವವನ್ನು ಬುಡಮೇಲುಗೊಳಿಸುವ ಕೆಲಸ ನಡೆದಿದೆ. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್‌ ಶಾ ಇದರ ಸೂತ್ರಧಾರರಾಗಿದ್ದಾರೆ. ರಾಜ್ಯಪಾಲ ವಜುಭಾಯಿ ವಾಲಾ ಮೂಲಕ ಸಮ್ಮಿಶ್ರ ಸರ್ಕಾರದ ಪತನಕ್ಕೆ ಹುನ್ನಾರ ನಡೆಸಿದ್ದಾರೆ’ ಎಂದು ದೂರಿದರು.

ವಿಧಾನ ಪರಿಷತ್ ಸದಸ್ಯ ಧರ್ಮಸೇನಾ, ಮಾಜಿ ಶಾಸಕ ಸೋಮಶೇಖರ್‌ ಇನ್ನಿತರ ಕಾಂಗ್ರೆಸ್ ಪ್ರಮುಖರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT