ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ಗೆಲುವು ನಿಶ್ಚಿತ; ಸಿದ್ದರಾಮಯ್ಯ 

Last Updated 9 ಅಕ್ಟೋಬರ್ 2021, 6:32 IST
ಅಕ್ಷರ ಗಾತ್ರ

ಮೈಸೂರು: ಎರಡೂ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಹಾಗೆಂದು, ಉಪಚುನಾವಣೆ ಫಲಿತಾಂಶ ಭವಿಷ್ಯದ ಚುನಾವಣೆ ದಿಕ್ಸೂಚಿ ಅಂತ ಹೇಳುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.

ಆದರೆ, ಈ ಫಲಿತಾಂಶದಿಂದ ಸರ್ಕಾರದ ಮೇಲೆ ಜನರ ಅಭಿಪ್ರಾಯ ಏನು ಎಂಬುದು ಗೊತ್ತಾಗುತ್ತದೆ. ಜನರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಬೇಸರಗೊಂಡಿದ್ದಾರೆ. ಹೀಗಾಗಿ ಜನರು ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನ್ನು ಗೆಲ್ಲಿಸುತ್ತಾರೆ ಎಂದು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಜೆಡಿಎಸ್‌ನವರು ಒಳ್ಳೆಯ ಉದ್ದೇಶದಿಂದ ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಟ್ಟಿಲ್ಲ. ಅಲ್ಪಸಂಖ್ಯಾತರ ಮತಗಳನ್ನು ವಿಂಗಡಿಸುವುದೇ ಅವರ ಉದ್ದೇಶ. ಆದರೆ ಜನ ಬುದ್ದಿವಂತರಿದ್ದಾರೆ. ಇಂತಹ ತಂತ್ರಗಳು ಜನರಿಗೆ ಅರ್ಥವಾಗುತ್ತವೆ ಎಂದು ತಿಳಿಸಿದರು.

ಆದಾಯ ತೆರಿಗೆ ದಾಳಿಯಲ್ಲಿ ರಾಜಕೀಯ ಇದೆ ಎಂಬುದು ನನ್ನ ಅನುಮಾನ. ಯಡಿಯೂರಪ್ಪ, ವಿಜಯೇಂದ್ರ ಆಪ್ತರನ್ನೇ ಗುರಿಯಾಗಿಸಿಕೊಂಡು ದಾಳಿ ಮಾಡಿದ್ದಾರೆ. ಇದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ನನಗಂತು ಇದರಲ್ಲಿ ರಾಜಕೀಯ ವಾಸನೆ ಬರುತ್ತಿದೆ ಎಂದು ಹೇಳಿದರು.
ನಾನು ರಾಷ್ಟ್ರ ರಾಜಕಾರಣಕ್ಕೆ ಹೋಗುವುದು ಕೇವಲ ಊಹಾಪೋಹ. ಸೋನಿಯಾಗಾಂಧಿಯವರೂ ಕರೆದಿಲ್ಲ.

ಆ ಬಗ್ಗೆ ಚರ್ಚೆಯೂ ಆಗಿಲ್ಲ. ಸುಮ್ಮನೆ ಊಹಾಪೋಹದ ಚರ್ಚೆಗಳು ಬೇಡ. ನಾನು ಎಂದೂ ಆ ಯೋಚನೆ ಮಾಡಿಯೂ ಇಲ್ಲ. ಆ ಬಗ್ಗೆ ಚರ್ಚೆ ಬೇಡ, ನಾನು ರಾಜ್ಯ ರಾಜಕಾರಣದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸ್ಪಷ್ಟಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT