ಶುಕ್ರವಾರ, ಜನವರಿ 22, 2021
24 °C

ಗೋಮಾಂಸ ರಫ್ತು ಮಾಡುವವರಲ್ಲಿ ಮೇಲ್ವರ್ಗದವರು, ಬ್ರಾಹ್ಮಣರೇ ಹೆಚ್ಚು: ಭಗವಾನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಗೋಮಾಂಸದ ರಫ್ತು ಪ್ರಮಾಣವನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರ ಗೋಹತ್ಯೆ ನಿಷೇಧಕ್ಕೆ ಮುಂದಾಗಿದೆ ಎಂದು ಸಾಹಿತಿ ಪ್ರೊ.ಕೆ.ಎಸ್‌.ಭಗವಾನ್‌ ಮಂಗಳವಾರ ಇಲ್ಲಿ ಆರೋಪಿಸಿದರು.

‘ನಮ್ಮ ದೇಶದಿಂದ ಗೋಮಾಂಸ ರಫ್ತುಮಾಡುವವರಲ್ಲಿ ಮೇಲ್ವರ್ಗದವರು, ಬ್ರಾಹ್ಮಣರೇ ಹೆಚ್ಚು ಇದ್ದಾರೆ ಎಂಬುದನ್ನು ಪತ್ರಿಕೆಗಳಲ್ಲಿ ಓದಿದ್ದೇನೆ. ಇಲ್ಲಿ ಗೋಹತ್ಯೆ ನಿಲ್ಲಿಸಿ ಹೊರ ದೇಶಗಳಿಗೆ ರಫ್ತು ಪ್ರಮಾಣ ಹೆಚ್ಚಿಸುವ ಹುನ್ನಾರ, ಇದೆ ಹಿಂದೆ ಅಡಗಿದೆ. ಇದು ಸರಿಯಾದ ಕ್ರಮ ಅಲ್ಲ’ ಎಂದರು.

‘ರೈತರು ಅನುಪಯುಕ್ತವಾದ ದನ, ಎಮ್ಮೆ, ಇತರ ಜಾನುವಾರುಗಳನ್ನು ಇಟ್ಟುಕೊಳ್ಳಲು ಇಷ್ಟಪಡುವುದಿಲ್ಲ. ಏಕೆಂದರೆ ಅದು ಆರ್ಥಿಕವಾಗಿ ಹೊರೆಯಾಗುತ್ತದೆ. ಅದನ್ನು ಸಾಕುವುದು ಕಷ್ಟ. ಆದ್ದರಿಂದ ಅವುಗಳನ್ನು ಮಾರಾಟ ಮಾಡುವರು. ಜಾನುವಾರುಗಳ ವಿಚಾರದಲ್ಲಿ ಹಳ್ಳಿಯ ರೈತರು ಯಾವುದೇ ಭಾವುಕವಾದ ವಿಚಾರಗಳನ್ನು ಇಟ್ಟುಕೊಂಡಿಲ್ಲ. ಇದನ್ನು ಸರ್ಕಾರ ಅರ್ಥಮಾಡಿಕೊಳ್ಳಬೇಕು’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು