ಶನಿವಾರ, ಜನವರಿ 18, 2020
25 °C

ಕಬಿನಿ ಬಲದಂಡೆ ನಾಲೆಯಲ್ಲಿ ಈಜಲು ಹೋಗಿ ಮೃತಪಟ್ಟಿದ್ದ ಕಾನ್‌ಸ್ಟೆಬಲ್ ಶವ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಂಜನಗೂಡು: ತಾಲ್ಲೂಕಿನ ಕಳಲೆ ಗ್ರಾಮದ ಬಳಿಯ ಕಬಿನಿ ಬಲದಂಡೆ ನಾಲೆಯಲ್ಲಿ ಈಜಲು ಹೋಗಿ ಮೃತಪಟ್ಟಿದ್ದ, ಚಿಕ್ಕಮಗಳೂರು ಜಿಲ್ಲೆ ಕಡೂರು ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಚಿದಾನಂದ್ (30) ದೇಹ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ.

ಈಜಲು ಬಿದ್ದ ಸ್ಥಳದಿಂದ ನೂರು ಮೀಟರ್ ದೂರದಲ್ಲಿ ಮೃತದೇಹವನ್ನು ಈಜುಗಾರರ ತಂಡ ಗುರುತಿಸಿ ಮೇಲೆ ತಂದಿದೆ.

ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ನಂತರ, ಕಡೂರಿಗೆ ಶವವನ್ನು ಕಳುಹಿಸಿಕೊಡಲಾಯಿತು ಎಂದು ಡಿ.ವೈ.ಎಸ್.ಪಿ. ಪ್ರಭಾಕರ್‌ರಾವ್‌ಸಿಂಧೆ ‘ಪ್ರಜಾವಾಣಿ’ಗೆ ತಿಳಿಸಿದರು.

ಶಬರಿಮಲೆ ಯಾತ್ರೆಗೆ ತೆರಳುತ್ತಿದ್ದ ವೇಳೆ ಚಿದಾನಂದ್ ನಾಲೆಯಲ್ಲಿ ಈಜಲು ಹೋಗಿ ಮೃತಪಟ್ಟಿದ್ದರು.

ಪ್ರತಿಕ್ರಿಯಿಸಿ (+)