ಕರ್ತವ್ಯನಿರತ ಕಾನ್‌ಸ್ಟೆಬಲ್‌ಗೆ ಹೃದಯಾಘಾತ; ಸಾವು

7

ಕರ್ತವ್ಯನಿರತ ಕಾನ್‌ಸ್ಟೆಬಲ್‌ಗೆ ಹೃದಯಾಘಾತ; ಸಾವು

Published:
Updated:

ಮೈಸೂರು: ಇಲ್ಲಿನ ಕುವೆಂಪುನಗರ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್‌ ನಾಗೇಂದ್ರ (27) ಹೃದಯಾಘಾತದಿಂದ ಗುರುವಾರ ಬೆಳಿಗ್ಗೆ ನಿಧನ ಹೊಂದಿದರು.

ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಿ ಮನೆಗೆ ತೆರಳುವಾಗ ತೀವ್ರವಾಗಿ ನಿತ್ರಾಣಗೊಂಡು ಕುಸಿದು ಬಿದ್ದರು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲಿ ಅವರು ಮೃತಪಟ್ಟಿದ್ದರು.

ಕೆ.ಆರ್.ನಗರ ತಾಲ್ಲೂಕಿನ ಚಿಕ್ಕ ಬೇರ್ಯ ಗ್ರಾಮದವರಾದ ಅವರು 2016ರಲ್ಲಿ ಪೊಲೀಸ್ ವೃತ್ತಿಗೆ ಸೇರಿದ್ದರು. ಕಳೆದ ಗುರುವಾರವಷ್ಟೇ ಅವರ ಮದುವೆ ನಿಶ್ಚಿತಾರ್ಥ ನೆರವೇರಿತ್ತು ಎಂದು ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 1

    Sad
  • 0

    Frustrated
  • 0

    Angry

Comments:

0 comments

Write the first review for this !