ಮಂಗಳವಾರ, ಏಪ್ರಿಲ್ 7, 2020
19 °C

‘ಹೋಂ ಕ್ವಾರಂಟೈನ್’ ಉಲ್ಲಂಘನೆ; ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ‘ಹೋಂ ಕ್ವಾರಂಟೈನ್’ (ಮನೆಯಲ್ಲೇ ನಿಗಾ) ಉಲ್ಲಂಘಿಸಿ ಸಾರ್ವಜನಿಕವಾಗಿ ಓಡಾಡಿದ ವಿದೇಶದಿಂದ ಬಂದ ವ್ಯಕ್ತಿಯೊಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಆಸ್ಟ್ರೇಲಿಯಾದಿಂದ ವ್ಯಕ್ತಿ ಭಾನುವಾರ ಬೆಂಗಳೂರಿಗೆ ಬಂದಿದ್ದರು. ವಿಮಾನ ನಿಲ್ದಾಣದಲ್ಲಿ ಇವರ ಮುಂಗೈಗೆ ಮುದ್ರೆ ಹಾಕಿ, 14 ದಿನ ಮನೆಯಲ್ಲೇ ಇರುವಂತೆ ಸೂಚಿಸಲಾಗಿತ್ತು. ಇದನ್ನು ಉಲ್ಲಂಘಿಸಿದ್ದಕ್ಕೆ ಐಪಿಸಿ ಸೆಕ್ಷನ್ 188, 269, 271 ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ವಿ.ವಿ.ಪುರಂ ಪೊಲೀಸರು ತಿಳಿಸಿದ್ದಾರೆ.

‘ಇನ್ನು ಮುಂದೆ ಹೋಂ ಕ್ವಾರಂಟೈನ್ ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ನಗರ ಪೊಲೀಸ್ ಕಮೀಷನರ್ ಡಾ.ಚಂದ್ರಗುಪ್ತ ಎಚ್ಚರಿಕೆ ನೀಡಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)