ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

11 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ

ಜಿಲ್ಲೆಯಲ್ಲಿ ಮತ್ತೆ ಐವರ ಸಾವು–597 ಮಂದಿಗೆ ಕೋವಿಡ್‌ ದೃಢ
Last Updated 18 ಆಗಸ್ಟ್ 2020, 7:26 IST
ಅಕ್ಷರ ಗಾತ್ರ

ಮೈಸೂರು: ಜಿಲ್ಲೆಯಲ್ಲಿ ಇದುವರೆಗೆ ಕೊರೊನಾ ಸೋಂಕಿಗೆ ಒಳಗಾದವರ ಒಟ್ಟು ಸಂಖ್ಯೆ 11 ಸಾವಿರ ಗಡಿ ದಾಟಿದೆ. ಸೋಮವಾರ ಮತ್ತೆ 597 ಮಂದಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ.

ಜಿಲ್ಲಾಡಳಿತ ಪ್ರಕಟಿಸಿರುವ ಪಟ್ಟಿ ಪ್ರಕಾರ 289 ಮಂದಿ ಗುಣಮುಖರಾಗಿದ್ದಾರೆ. ಇದರೊಂದಿಗೆ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 6,764ಕ್ಕೆ ಏರಿದೆ. ಜಿಲ್ಲೆಯ ವಿವಿಧೆಡೆ ಮತ್ತೆ 88 ಪ್ರದೇಶಗಳನ್ನು ಕಂಟೈನ್‌ಮೆಂಟ್‌ ವಲಯಗಳೆಂದು ಘೋಷಿಸಿ ಸೀಲ್‌ಡೌನ್‌ ಮಾಡಲಾಗಿದೆ.

5 ಮಂದಿ ಮೃತಪಟ್ಟಿದ್ದಾರೆ ಎಂಬುದನ್ನು ಜಿಲ್ಲಾಡಳಿತದ ಪಟ್ಟಿಯಲ್ಲಿ ನಮೂದಿಸಲಾಗಿದೆ. 90 ವರ್ಷದ ವೃದ್ಧೆ, 57 ಹಾಗೂ 58 ವರ್ಷದ ಮಹಿಳೆಯರು, 60 ಹಾಗೂ 76 ವರ್ಷದ ವೃದ್ಧರು ಮೃತರು. ಇದರೊಂದಿಗೆ ಒಟ್ಟು ಮೃತರ ಸಂಖ್ಯೆ 309ಕ್ಕೆ ತಲುಪಿದೆ.

‌ಇದುವರೆಗೆ 2,213 ಮಂದಿಯನ್ನು ಮನೆಯಲ್ಲೇ ಐಸೊಲೇಷನ್‌ ಮಾಡಲಾಗಿದೆ. ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ 234, ಕೋವಿಡ್‌ ಚಿಕಿತ್ಸಾ ಕೇಂದ್ರದಲ್ಲಿ 124, ಕೋವಿಡ್‌ ಕೇರ್‌ ಕೇಂದ್ರದಲ್ಲಿ 1,083, ಖಾಸಗಿ ಕೋವಿಡ್‌ ಕೇರ್‌ ಕೇಂದ್ರದಲ್ಲಿ 140 ಹಾಗೂ ಖಾಸಗಿ ಆಸ್ಪತ್ರೆಯಲ್ಲಿ 265 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಾಥಮಿಕ ಸಂಪರ್ಕಿತ 239 ಮಂದಿ, ಶೀತ ಜ್ವರ ಮಾದರಿಯ ಅನಾರೋಗ್ಯ ಲಕ್ಷಣದಿಂದ (ಐಎಲ್‌ಐ) ಬಳಲುತ್ತಿದ್ದ 144 ಮಂದಿ, ತೀವ್ರ ಉಸಿರಾಟ ಸಮಸ್ಯೆಯಿಂದ (ಎಸ್‌ಎಆರ್‌ಐ) ಬಳಲುತ್ತಿದ್ದ 17 ಮಂದಿಯಲ್ಲಿ ಕೋವಿಡ್‌ ಕಾಣಿಸಿಕೊಂಡಿದೆ. ಪ್ರವಾಸ ಹಿನ್ನೆಲೆ ಹೊಂದಿದ್ದು, ಸೋಂಕಿತರಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇತರ ರಾಜ್ಯ ಮತ್ತು ಜಿಲ್ಲೆಗಳಿಂದ ಬಂದ 197 ಮಂದಿಯಲ್ಲಿ ಸೋಂಕು ಇರುವುದು ಗೊತ್ತಾಗಿದೆ.

31,229 ಮಂದಿಯನ್ನು 14 ದಿನಗಳ ಹೋಂ ಕ್ವಾರಂಟೈನ್‌ ಮಾಡಲಾಗಿದೆ.ಇದುವರೆಗೆ ಒಟ್ಟು 71,783 ಮಂದಿಯ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT