ಶನಿವಾರ, ಆಗಸ್ಟ್ 13, 2022
23 °C

ಮೈಸೂರು: 221 ಜನರಿಗೆ ಕೋವಿಡ್; 199 ಮಂದಿ ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಜಿಲ್ಲೆಯಲ್ಲಿ ಸೋಮವಾರ 221 ಜನರಲ್ಲಿ ಕೋವಿಡ್–19 ದೃಢಪಟ್ಟಿದ್ದು, 199 ಮಂದಿ ಗುಣಮುಖರಾಗಿದ್ದಾರೆ. 9 ಜನರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 22,301ಕ್ಕೆ ತಲುಪಿದೆ. ಗುಣಮುಖರ ಸಂಖ್ಯೆ 14,695 ಆಗಿದೆ. ಸಾವಿನ ಸಂಖ್ಯೆಯೂ 512ಕ್ಕೆ ತಲುಪಿದೆ. ‌

ಪ್ರಸ್ತುತ 7,094 ಜನರು ಕೋವಿಡ್–19ಗೆ ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ. 307 ಮಂದಿ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರೆ, 862 ಜನರು ಕೋವಿಡ್ ಕೇರ್ ಸೆಂಟರ್‌ನಲ್ಲಿ ಆರೈಕೆಯಲ್ಲಿದ್ದಾರೆ. 103 ಮಂದಿ ಹೆಲ್ತ್‌ ಕೇರ್‌ ಸೆಂಟರ್‌ಗೆ ದಾಖಲಾಗಿದ್ದಾರೆ.

ಮನೆಯಲ್ಲೇ 5,297 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ತಮ್ಮ ನಿವಾಸಗಳಲ್ಲೇ ಐಸೊಲೇಷನ್‌ ಆಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಿದೆ. 257 ಮಂದಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದು, 268 ಜನರು ಖಾಸಗಿ ಕೋವಿಡ್ ಕೇರ್ ಸೆಂಟರ್‌ಗೆ ಆರೈಕೆಗಾಗಿ ದಾಖಲಾಗಿದ್ದಾರೆ ಎಂಬುದು ಜಿಲ್ಲಾಡಳಿತದ ಅಂಕಿ–ಅಂಶಗಳಿಂದ ತಿಳಿದು ಬಂದಿದೆ.

ಕೋವಿಡ್‌ ಅಂಕಿ–ಅಂಶ

ಜಿಲ್ಲೆಯಲ್ಲಿ ಒಟ್ಟು–22,301, ಸಕ್ರಿಯ ಪ್ರಕರಣ–7,094, ಗುಣಮುಖ–14,695, ಸಾವು–512

ದಿನದ ಏರಿಕೆ–221, ಗುಣಮುಖ–199, ಸಾವು–9

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು