ಸೋಮವಾರ, ಆಗಸ್ಟ್ 2, 2021
28 °C
ಕೋವಿಡ್‌ಗೆ ಒಂದೇ ದಿನ ನಾಲ್ಕು ಸಾವು; 51 ಹೊಸ ಪ್ರಕರಣ

ಮೈಸೂರು | ಸಾವಿನ ಸಂಖ್ಯೆ 20ಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಆತಂಕ ಹೆಚ್ಚುತ್ತಿದ್ದು, ಶುಕ್ರವಾರ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಸತ್ತವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.

ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ 83 ವರ್ಷ, 72 ವರ್ಷ ಮತ್ತು 42 ವರ್ಷ ವಯಸ್ಸಿನ ಪುರುಷರು ಮತ್ತು 65 ವರ್ಷ ವಯಸ್ಸಿನ ಮಹಿಳೆ ಮೃತಪಟ್ಟಿದ್ದಾರೆ. ಈ ನಾಲ್ಕೂ ಮಂದಿ ತೀವ್ರ ಉಸಿರಾಟದ ತೊಂದರೆಯಿಂದ (ಎಸ್‌ಎಆರ್‌ಐ) ಬಳಲುತ್ತಿದ್ದರು ಎಂದು ಆರೋಗ್ಯ ಇಲಾಖೆಯ ಮಾಹಿತಿ ತಿಳಿಸಿದೆ.

ಇದರಲ್ಲಿ 42 ಮತ್ತು 72 ವರ್ಷ ವಯಸ್ಸಿನ ವ್ಯಕ್ತಿಗಳು ಜು.8 ರಂದು ಆಸ್ಪತ್ರೆಗೆ ದಾಖಲಾಗಿದ್ದು, 9 ರಂದು ಮೃತಪಟ್ಟಿದ್ದಾರೆ. 65 ವರ್ಷದ ಮಹಿಳೆ ಜು.9 ರಂದು ಆಸ್ಪತ್ರೆಗೆ ಸೇರಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಅದೇ ದಿನ ನಿಧನರಾಗಿದ್ದಾರೆ. ಜಿಲ್ಲೆಯಲ್ಲಿ ಗುರುವಾರ ಇಬ್ಬರು ಮೃತಪಟ್ಟಿದ್ದರು.

51 ಹೊಸ ಪ್ರಕರಣ: ಜಿಲ್ಲೆಯಲ್ಲಿ ಹೊಸ ಪ್ರಕರಣಗಳ ಸಂಖ್ಯೆಯೂ ಹೆಚ್ಚುತ್ತಿದ್ದು, ಶುಕ್ರವಾರ 51 ಮಂದಿಗೆ ಕೋವಿಡ್‌ ದೃಢಪಟ್ಟಿದೆ.

ಸೋಂಕಿತರಲ್ಲಿ 11 ಮತ್ತು 13 ವರ್ಷ ವಯಸ್ಸಿನ ಬಾಲಕಿಯರೂ ಸೇರಿದ್ದಾರೆ. ಗುರುವಾರ 52 ಮಂದಿಯಲ್ಲಿ ಸೋಂಕು ದೃಢಪಟ್ಟಿತ್ತು. ಕಳೆದ ಮೂರು ದಿನಗಳಲ್ಲಿ 150ಕ್ಕೂ ಅಧಿಕ ಹೊಸ ಪ್ರಕರಣಗಳು ವರದಿಯಾಗಿದ್ದು, ಆತಂಕವನ್ನು ಇಮ್ಮಡಿಗೊಳಿಸಿದೆ.

ಹೊಸದಾಗಿ ಸೋಂಕು ದೃಢಪಟ್ಟವರಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕಿತರು, ತೀವ್ರ ಉಸಿರಾಟದ ತೊಂದರೆ, ಶೀತ ಜ್ವರ ಮಾದರಿಯ ಅನಾರೋಗ್ಯದ ಲಕ್ಷಣದಿಂದ (ಐಎಲ್‌ಐ) ಬಳಲುತ್ತಿರುವವರು, ಬೇರೆ ಜಿಲ್ಲೆಯಿಂದ ಬಂದವರು ಸೇರಿದ್ದಾರೆ.

ಶಾಸಕರ ಆಪ್ತ ಸಹಾಯಕರಿಗೆ ಸೋಂಕು: ನಗರದ ಶಾಸಕರೊಬ್ಬರ ಇಬ್ಬರು ಆಪ್ತ ಸಹಾಯಕರಿಗೂ ಸೋಂಕು ತಗುಲಿದೆ. ಆದರೆ ಈ ಇಬ್ಬರು ಕಳೆದ ಹತ್ತು ದಿನಗಳಿಂದ ಶಾಸಕರ ಸಂಪರ್ಕಕ್ಕೆ ಬಂದಿಲ್ಲ ಎನ್ನಲಾಗಿದೆ.

ಮೈಸೂರು ನಗರ ಮತ್ತು ಜಿಲ್ಲೆಯ ಇತರ ಭಾಗಗಳಲ್ಲಿ ಕಂಟೈನ್‌ಮೆಂಟ್‌ ಪ್ರದೇಶಗಳ ಸಂಖ್ಯೆಯೂ ಹೆಚ್ಚಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು