ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಕೊರೊನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆ

Last Updated 24 ಜುಲೈ 2020, 8:25 IST
ಅಕ್ಷರ ಗಾತ್ರ

ಮೈಸೂರು: ಕೊರೊನಾ ಸೋಂಕಿತ 57 ವರ್ಷದ ವ್ಯಕ್ತಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜೆ.ಕೆ.ಟೈರ್ಸ್ ಕಾರ್ಖಾನೆಯಲ್ಲಿ ಉದ್ಯೋಗಿಯಾಗಿದ್ದ ಇವರಿಗೆ ಜುಲೈ 19ರಂದು ಕೋವಿಡ್– 19 ದೃಢಪಟ್ಟಿತ್ತು. 23ರಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಿ, ಮನೆಯಲ್ಲೇ ಐಸೊಲೇಷನ್‌ನಲ್ಲಿದ್ದು, ಚಿಕಿತ್ಸೆ ಮುಂದುವರಿಸುವಂತೆ ವೈದ್ಯರು ತಿಳಿಸಿದ್ದರು.

ಗುರುವಾರ ರಾತ್ರಿ ಗೋಕುಲಂನಲ್ಲಿರುವ ತಮ್ಮ ನಿವಾಸಕ್ಕೆ ಬಂದ ಇವರು, ಮಹಡಿಯ ಕೋಣೆಯಲ್ಲಿ ಪ್ರತ್ಯೇಕವಾಗಿ ಊಟ ಮಾಡಿ ಮಲಗಿದ್ದಾರೆ. ಶುಕ್ರವಾರ ಬೆಳಿಗ್ಗೆ ಮನೆಯ ಸದಸ್ಯರು ಉಪಾಹಾರ ನೀಡಲು ಹೋದಾಗ ನೇಣು ಹಾಕಿಕೊಂಡಿರುವುದು ಗೊತ್ತಾಗಿದೆ. ಕೊರೊನಾ ಸೋಂಕು ತಗುಲಿದ ನಂತರ ಇವರು ಖಿನ್ನತೆಗೆ ಜಾರಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ವಿ.ವಿ ಪುರಂ ಠಾಣೆಯಲ್ಲಿ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT