ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು | ಕ್ಷೇತ್ರ ಶಿಕ್ಷಣಾಧಿಕಾರಿ, ಕಚೇರಿ ಅಧೀಕ್ಷಕ ವಶಕ್ಕೆ

ಎಚ್.ಡಿ.ಕೋಟೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ
Last Updated 23 ಜೂನ್ 2022, 16:41 IST
ಅಕ್ಷರ ಗಾತ್ರ

ಎಚ್.ಡಿ.ಕೋಟೆ: ನಿವೃತ್ತ ಶಿಕ್ಷಕರಿಂದ ಲಂಚ ಪಡೆದ ಆರೋಪದ ಮೇಲೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಚಂದ್ರಕಾಂತ್ ಹಾಗೂ ಕಚೇರಿ ಅಧೀಕ್ಷಕ ಶಂಕರ್ ಅವರನ್ನುಇಲಾಖೆಕಚೇರಿಯಲ್ಲೇಗುರುವಾರ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದರು.

ನಿವೃತ್ತಿ ವೇತನಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಬೆಂಗಳೂರಿನ ಮಹಾ ಲೆಕ್ಕಾಧಿರಿಗಳ ಕಚೇರಿಗೆ ಕಳಿಸುವ ಸಂಬಂಧ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧೀಕ್ಷಕ ಮತ್ತು ದ್ವಿತೀಯ ದರ್ಜೆ ಸಹಾಯಕರು, ₹9 ಸಾವಿರ ಕೊಡುವಂತೆ ಆಗ್ರಹಿಸಿದ್ದಾರೆಂದು ನಂಜನಗೂಡು ತಾಲ್ಲೂಕು ರಾಂಪುರ ಗ್ರಾಮದ ನಿವೃತ್ತ ಶಿಕ್ಷಕ ಸಿದ್ದರಾಜು ಅವರು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳಿಗ ದೂರು ಕೊಟ್ಟಿದ್ದರು.

ದೂರು ಆಧರಿಸಿ ಗುರುವಾರ ಬೆಳಿಗ್ಗೆಯಿಂದ ಸಂಜೆ ತನಕ ಕಚೇರಿ ಮುಂದೆ ಕಾದ ಅಧಿಕಾರಿಗಳು, ಸಂಜೆ 5 ಗಂಟೆಗೆ ದಾಳಿ ನಡಸಿದರು.

ಕಚೇರಿಯ ದ್ವಿತೀಯ ದರ್ಜೆ ಸಹಾಯಕ ರವಿ ಕಚೇರಿಯಿಂದ ಕೆಲಸದ ನಿಮಿತ್ತ ಹೊರಗೆ ಹೋಗಿದ್ದರಿಂದ ಅಧಿಕಾರಿಗಳ ಕೈಗೆ ಸಿಕ್ಕಿಲ್ಲ ಎನ್ನಲಾಗಿದೆ.

ಎಸಿಬಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸುಜಿತ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ತಮ್ಮಯ್ಯ ನೇತೃತ್ವದಲ್ಲಿ ಎಸ್‌ಐಗಳಾದ ಚಿತ್ತರಂಜನ್, ಮೋಹನ್ ಕೃಷ್ಣ, ಚೇತನ್, ಗುರುಪ್ರಸಾದ್, ಮಂಜು, ಪುಷ್ಪಲತಾ, ಯೋಗೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT