ಮೈಸೂರು: ‘ಇಲ್ಲಿನ ಮಹಾನಗರ ಪಾಲಿಕೆಯ ವಾಣಿ ವಿಲಾಸ ನೀರು ಸರಬರಾಜು ವಿಭಾಗದಲ್ಲಿ ನಾಲ್ವರನ್ನು ಕಾಯಂಗೊಳಿಸಿದ್ದು, ಈ ಪ್ರಕ್ರಿಯೆ ಅಕ್ರಮದಿಂದ ಕೂಡಿದೆ. ಇದರಲ್ಲಿ ಭ್ರಷ್ಟಾಚಾರ ನಡೆದಿದೆ’ ಎಂದು ಮೈಸೂರು ಮಹಾನಗರ ಪಾಲಿಕೆ ವಾಣಿ ವಿಲಾಸ ನೀರು ಸರಬರಾಜು ಮಂಡಳಿ ವರ್ಕರ್ಸ್ ಯೂನಿಯನ್‌ನ ಅಧ್ಯಕ್ಷ ಎಸ್.ಶಾಂತಪ್ಪ ಸೋಮವಾರ ಇಲ್ಲಿ ದೂರಿದರು.

‘300 ಜನರು 15 ವರ್ಷದಿಂದ ಗುತ್ತಿಗೆ ನೌಕರರಾಗಿ ದುಡಿಯುತ್ತಿದ್ದರೂ; ಕೇವಲ ನಾಲ್ಕು ಮಂದಿಯನ್ನಷ್ಟೇ ಕಾಯಂಗೊಳಿಸಿದ್ದಾರೆ. ಇದರ ವಿರುದ್ಧ ಹೈಕೋರ್ಟ್‌ನಲ್ಲಿ ಪಿಐಎಲ್ ಹಾಕುತ್ತೇವೆ’ ಎಂದು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಗುತ್ತಿಗೆ ಪದ್ಧತಿಯನ್ನು 2012ರಲ್ಲೇ ರದ್ದುಗೊಳಿಸಲಾಗಿದೆ. ಆದರೂ 200 ಹೊರ ಗುತ್ತಿಗೆ ನೌಕರರನ್ನು ಅಕ್ರಮವಾಗಿ ನೇಮಿಸಿಕೊಳ್ಳಲಾಗಿದೆ’ ಎಂದು ಶಾಂತಪ್ಪ ಆರೋಪಿಸಿದರು.

ಡಿ.ಎಂ.ಕೆಂಚಪ್ಪ ಪತ್ರಿಕಾಗೋಷ್ಠಿಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.