ಸೋಮವಾರ, ಜೂಲೈ 6, 2020
23 °C

ಹೆಚ್ಚುವರಿ ನ್ಯಾಯಾಲಯ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಇಲ್ಲಿನ ಜಯನಗರದ ಮಳಲವಾಡಿಯಲ್ಲಿರುವ ನೂತನ ನ್ಯಾಯಾಲಯದ ಆವರಣದಲ್ಲಿ ಸೋಮವಾರ ಹೊಸದಾಗಿ ಮೂರು ನ್ಯಾಯಾಲಯದ ವಿಭಾಗಗಳನ್ನು ಉದ್ಘಾಟಿಸಲಾಯಿತು.

ನ್ಯಾಯಾಲಯದಲ್ಲಿ ಹೆಚ್ಚುವರಿಯಾಗಿ ಹಿರಿಯ ಶ್ರೇಣಿಯ 5, 6, 7ನೇ ಎಸಿಜೆ ನ್ಯಾಯಾಲಯಗಳಿಗೆ ಪ್ರಧಾನ ಜಿಲ್ಲಾ ನ್ಯಾಯಾಧೀಶ ರಾಮಚಂದ್ರ ಡಿ.ಉದ್ದಾರ ಚಾಲನೆ ನೀಡಿದರು.

ಮೈಸೂರು ವಕೀಲರ ಸಂಘದ ಅಧ್ಯಕ್ಷ ಎಸ್.ಆನಂದ್ ಕುಮಾರ್, ವಕೀಲರ ಸಂಘದ ಕಾರ್ಯದರ್ಶಿ ಬಿ.ಶಿವಣ್ಣ, ಉಪಾಧ್ಯಕ್ಷ ಎಸ್.ಜಿ.ಶಿವಣ್ಣೇಗೌಡ ಮತ್ತಿತರ ಪದಾಧಿಕಾರಿಗಳು, ನ್ಯಾಯಾಧೀಶರು ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.