ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: 135 ಹೊಸ ಪ್ರಕರಣ

Last Updated 9 ನವೆಂಬರ್ 2020, 7:25 IST
ಅಕ್ಷರ ಗಾತ್ರ

ಮೈಸೂರು: ಜಿಲ್ಲೆಯಲ್ಲಿ ಹೊಸದಾಗಿ 135 ಮಂದಿಗೆ ಕೋವಿಡ್‌ ದೃಢಪಟ್ಟಿದೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 48,755ಕ್ಕೆ ಏರಿಕೆಯಾಗಿದೆ.

69 ಮಂದಿ ಗುಣಮುಖರಾಗಿದ್ದು, ಇದೀಗ 1,069 ಸಕ್ರಿಯ ಪ್ರಕರಣಗಳು ಇವೆ. ಮತ್ತೆ ಇಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಸತ್ತವರ ಸಂಖ್ಯೆ 974ಕ್ಕೆ ಹೆಚ್ಚಿದೆ.

443 ಮಂದಿ ಮನೆಯಲ್ಲೇ ಐಸೊಲೇಷನ್‌ ಆಗಿದ್ದಾರೆ. ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ 153 ಮಂದಿ, ಖಾಸಗಿ ಆಸ್ಪತ್ರೆಗಳಲ್ಲಿ 291 ಮಂದಿ, ಕೋವಿಡ್‌ ಚಿಕಿತ್ಸಾ ಕೇಂದ್ರದಲ್ಲಿ 60, ಖಾಸಗಿ ಕೋವಿಡ್‌ ಚಿಕಿತ್ಸಾ ಕೇಂದ್ರದಲ್ಲಿ 74, ಕೋವಿಡ್‌ ಕೇರ್‌ ಕೇಂದ್ರದಲ್ಲಿ 36, ಖಾಸಗಿ ಕೋವಿಡ್‌ ಕೇರ್‌ ಕೇಂದ್ರದಲ್ಲಿ 12 ಮಂದಿ ಆರೈಕೆ ಪಡೆಯುತ್ತಿದ್ದಾರೆ.

ರೋಗಿಗಳ ಸಂಪರ್ಕಕ್ಕೆ ಬಂದ 91 ಮಂದಿ, ಶೀತ ಜ್ವರ ಮಾದರಿಯ ಅನಾರೋಗ್ಯ ಲಕ್ಷಣದಿಂದ (ಐಎಲ್‌ಐ) ಬಳಲುತ್ತಿದ್ದ 29 ಮಂದಿ, ತೀವ್ರ ಉಸಿರಾಟ ಸಮಸ್ಯೆ
ಯಿಂದ (ಎಸ್‌ಎಆರ್‌ಐ) ಬಳಲುತ್ತಿದ್ದ 4 ಹಾಗೂ ಇತರ 11 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಜಿಲ್ಲಾಡಳಿತದ ಭಾನುವಾರದ ಮಾಹಿತಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT