ಭಾನುವಾರ, ಸೆಪ್ಟೆಂಬರ್ 19, 2021
29 °C

6–8ನೇ ತರಗತಿ ಶಾಲೆ ಆರಂಭ: ಮಕ್ಕಳಿಗೆ ಹೂ ನೀಡಿ ಸ್ವಾಗತ ಕೋರಿದ ಶಿಕ್ಷಕರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಆರರಿಂದ ಎಂಟನೇ ತರಗತಿ ಇಂದು ಆರಂಭವಾಗಿದ್ದು, ಬೆಳಿಗ್ಗೆ 9.30ರಿಂದಲೇ ನಗರದ ವಿವಿಧ ಬಡಾವಣೆಗಳಿಂದ ವಿದ್ಯಾರ್ಥಿಗಳು ಲವಲವಿಕೆಯಿಂದ ಶಾಲೆಗೆ ಬಂದರು.

ಕೆಲ ಪೋಷಕರು ಶಾಲೆವರೆಗೆ ಬಂದು ತಮ್ಮ ಮಕ್ಕಳನ್ನು ಬಿಟ್ಟು ಹೋಗುತ್ತಿದ್ದ ದೃಶ್ಯಗಳು ಕಂಡುಬಂದವು. ಜೊತೆಗೆ ಶಿಕ್ಷಕರೊಂದಿಗೆ ಮಾತಿನಲ್ಲಿ ತೊಡಗಿದ್ದರು. ಮೊದಲನೇ ದಿನ ಮಕ್ಕಳ ಸಂಖ್ಯೆ ಕಡಿಮೆ ಇತ್ತು. ಮಕ್ಕಳಿಗೆ ಹೂವು ನೀಡಿ, ಆರತಿ ಎತ್ತಿ ಸ್ವಾಗತ ಕೋರಿದರು. ಬಾಗಿಲಲ್ಲೇ ನಿಂತ ಶಿಕ್ಷಕರು ಹಾಗೂ ಸಿಬ್ಬಂದಿ ಮಕ್ಕಳನ್ನು ಥರ್ಮಲ್‌ ತಪಾಸಣೆಗೆ ಒಳಪಡಿಸಿದರು. 10.30ಕ್ಕೆ ಭೌತಿಕ ತರಗತಿಗಳು ಆರಂಭವಾಗಿದ್ದು, ಮಧ್ಯಾಹ್ನ 1.30ರವರೆಗೆ ನಡೆಯಲಿವೆ. ಕೆಲ ಶಾಲೆಗಳಲ್ಲಿ ಬಿಸಿ ನೀರಿನ ವ್ಯವಸ್ಥೆ ಮಾಡಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದು, ಶಾಲಾ ಕೊಠಡಿಗಳನ್ನು ಹಿಂದಿನ ದಿನವೇ ಸ್ಯಾನಿಟೈಸ್‌ ಮಾಡಿದೆ. ಬಹುತೇಕ ಮಕ್ಕಳು ಮಾಸ್ಕ್‌ ಧರಿಸಿ ಶಾಲೆಗೆ ಬಂದಿದ್ದಾರೆ.

ಆನ್‌ಲೈನ್‌ ತರಗತಿಗೆ ಹಾಜರಾಗುವ ಅವಕಾಶವೂ ಇದೆ. ಜಿಲ್ಲೆಯಲ್ಲಿ ಒಟ್ಟು 1.33 ಲಕ್ಷ ವಿದ್ಯಾರ್ಥಿಗಳು ಹಾಗೂ ಒಟ್ಟು 12,931 ಶಿಕ್ಷಕರು ಇದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು