ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

404 ಕೋವಿಡ್‌ ಪ್ರಕರಣ ದೃಢ

ಜಿಲ್ಲೆಯಲ್ಲಿ 262 ಮಂದಿ ಗುಣಮುಖ; 3 ಸಾವು
Last Updated 17 ಅಕ್ಟೋಬರ್ 2020, 5:09 IST
ಅಕ್ಷರ ಗಾತ್ರ

ಮೈಸೂರು: ಜಿಲ್ಲೆಯಲ್ಲಿ ಹೊಸದಾಗಿ 404 ಮಂದಿಯಲ್ಲಿ ಕೋವಿಡ್‌ ದೃಢಪಟ್ಟಿದೆ. ಇದರಿಂದ ಸೋಂಕಿತರ ಒಟ್ಟು ಸಂಖ್ಯೆ 44,137 ಕ್ಕೆ ಏರಿಕೆಯಾಗಿದೆ.

ಮತ್ತೆ ಮೂವರು ಮೃತಪಟ್ಟಿದ್ದು, ಸತ್ತವರ ಸಂಖ್ಯೆ 912ಕ್ಕೆ ಹೆಚ್ಚಳವಾಗಿದೆ. 72 ವರ್ಷದ ಪುರುಷ ಮತ್ತು 55, 82 ವರ್ಷದ ಮಹಿಳೆಯರು ವಿವಿಧ ದಿನಗಳಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯ ಶುಕ್ರವಾರದ ವರದಿ ತಿಳಿಸಿದೆ.

ಇದೇ ವೇಳೆ 261 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 7,120 ಸಕ್ರಿಯ ಪ್ರಕರಣಗಳು ಇವೆ. 5,527 ಮಂದಿ ಮನೆಯಲ್ಲೇ ಐಸೊಲೇಷನ್‌ ಆಗಿದ್ದಾರೆ. ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ 319 ಮಂದಿ, ಕೋವಿಡ್‌ ಚಿಕಿತ್ಸಾ ಕೇಂದ್ರದಲ್ಲಿ 65, ಕೋವಿಡ್‌ಕೇರ್‌ ಕೇಂದ್ರದಲ್ಲಿ 480, ಖಾಸಗಿ ಕೋವಿಡ್‌ ಕೇರ್‌ ಕೇಂದ್ರದಲ್ಲಿ 136 ಹಾಗೂ ಖಾಸಗಿ ಆಸ್ಪತ್ರೆಯಲ್ಲಿ 593 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರೋಗಿಗಳ ಸಂಪರ್ಕಕ್ಕೆ ಬಂದ 278 ಮಂದಿಗೆ ಕೋವಿಡ್‌ ದೃಢಪಟ್ಟಿದೆ. ಶೀತ ಜ್ವರ ಮಾದರಿಯ ಅನಾರೋಗ್ಯ ಲಕ್ಷಣದಿಂದ (ಐಎಲ್‌ಐ) ಬಳಲುತ್ತಿದ್ದ 86 ಮಂದಿ, ತೀವ್ರ ಉಸಿರಾಟ ಸಮಸ್ಯೆಯಿಂದ (ಎಸ್‌ಎಆರ್‌ಐ) ಬಳಲುತ್ತಿದ್ದ 13 ಹಾಗೂ ಇತರ 27 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 2,44,462 ಮಂದಿಗೆ ಕೋವಿಡ್‌ ಪರೀಕ್ಷೆ ಮಾಡಲಾಗಿದೆ. 57,180 ಮಂದಿ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT