ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: 564 ಹೊಸ ಪ್ರಕರಣ

Last Updated 1 ಅಕ್ಟೋಬರ್ 2020, 8:10 IST
ಅಕ್ಷರ ಗಾತ್ರ

ಮೈಸೂರು: ಜಿಲ್ಲೆಯಲ್ಲಿ 564 ಹೊಸ ಕೋವಿಡ್‌ ಪ್ರಕರಣಗಳು ವರದಿಯಾ ಗಿದ್ದು, ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 34,518ಕ್ಕೆ ಏರಿಕೆಯಾಗಿದೆ.

ಇದೇ ವೇಳೆ 200 ಮಂದಿ ಗುಣಮುಖರಾಗಿದ್ದಾರೆ. ಆರು ಮಂದಿ ಮೃತಪಟ್ಟಿದ್ದು, ಸತ್ತವರ ಸಂಖ್ಯೆ 737ಕ್ಕೆ ತಲುಪಿದೆ.

ರೋಗಿಗಳ ಸಂಪರ್ಕಕ್ಕೆ ಬಂದ 296 ಮಂದಿ, ಪ್ರಯಾಣದ ಹಿನ್ನೆಲೆ ಹೊಂದಿರುವ 79 ಮಂದಿ, ಶೀತ ಜ್ವರ ಮಾದರಿಯ ಅನಾರೋಗ್ಯ ಲಕ್ಷಣದಿಂದ (ಐಎಲ್‌ಐ) ಬಳಲುತ್ತಿದ್ದ 163 ಮಂದಿ, ತೀವ್ರ ಉಸಿರಾಟ ಸಮಸ್ಯೆಯಿಂದ (ಎಸ್‌ಎಆರ್‌ಐ) ಬಳಲುತ್ತಿದ್ದ 26 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಡಳಿತದ ಬುಧವಾರದ ಮಾಹಿತಿ ತಿಳಿಸಿದೆ.

ಜಿಲ್ಲೆಯಲ್ಲಿ ಇದೀಗ ಒಟ್ಟು 7,110 ಸಕ್ರಿಯ ಪ್ರಕರಣಗಳು ಇವೆ. 5,326 ಮಂದಿ ಮನೆಯಲ್ಲೇ ಐಸೊಲೇಷನ್‌ ಆಗಿದ್ದಾರೆ. ಜಿಲ್ಲಾ ಕೋವಿಡ್‌
ಆಸ್ಪತ್ರೆಯಲ್ಲಿ 318, ಕೋವಿಡ್‌ ಚಿಕಿತ್ಸಾ ಕೇಂದ್ರದಲ್ಲಿ 70, ಕೋವಿಡ್‌ ಕೇರ್‌ ಕೇಂದ್ರದಲ್ಲಿ 568, ಖಾಸಗಿ ಕೋವಿಡ್‌ ಕೇರ್‌ ಕೇಂದ್ರದಲ್ಲಿ 230 ಹಾಗೂ ಖಾಸಗಿ ಆಸ್ಪತ್ರೆಯಲ್ಲಿ 598 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT