ಬುಧವಾರ, ಅಕ್ಟೋಬರ್ 28, 2020
18 °C
ಹೊಸದಾಗಿ ಸೋಂಕಿತರಾದವರು 524, ಗುಣಮುಖರಾದವರು 633, 15 ಮಂದಿ ಸಾವು

ಕೋವಿಡ್: ಸಕ್ರಿಯ ಪ್ರಕರಣಗಳಲ್ಲಿ ಇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಜಿಲ್ಲೆಯಲ್ಲಿ ಸೋಮವಾರ ಕೋವಿಡ್‌-19 ಸಕ್ರಿಯ ಪ್ರಕರಣಗಳಲ್ಲಿ ಇಳಿಕೆಯಾಗಿದೆ. ಭಾನುವಾರ 4,611 ಇದ್ದ ಸಕ್ರಿಯ ಪ್ರಕರಣಗಳ ಸಂಖ್ಯೆ ಸೋಮವಾರ 4,487ಕ್ಕೆ ಕಡಿಮೆಯಾಗಿದೆ.

ಕೊರೊನಾ ಸೋಂಕಿನಿಂದ 633 ಮಂದಿ ಗುಣಮುಖರಾಗುವ ಮೂಲಕ, ಕೋವಿಡ್‌ನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 25,115ಕ್ಕೆ ತಲುಪಿದೆ. ಒಟ್ಟು 30,308 ಮಂದಿ ಸೋಂಕಿತರ ಪೈಕಿ 4,487 ಮಂದಿಯಷ್ಟೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ, 1,018 ಮತ್ತು ಭಾನುವಾರ 1,050 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದರು.

ಹೊಸದಾಗಿ 524 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇತರೆ ಕೋವಿಡ್ ರೋಗಿಗಳ ಸಂಪರ್ಕಕ್ಕೆ ಬಂದ 278 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಪ್ರಯಾಣ ಮಾಡಿ ಬಂದ 89 ಮಂದಿ ಸೋಂಕಿತರಾಗಿದ್ದಾರೆ. 134 ಮಂದಿ ಶೀತಜ್ವರದ ಮಾದರಿಯ ಲಕ್ಷಣಗಳಿಂದ ಬಳಲುತ್ತಿದ್ದಾರೆ. 23 ಮಂದಿಯಲ್ಲಿ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.

4,487 ಸಕ್ರಿಯ ಪ್ರಕರಣಗಳ ಪೈಕಿ 2,903 ಮಂದಿ ಮನೆಯಲ್ಲೇ ಐಸೊಲೇಷನ್‌ ಆಗಿದ್ದಾರೆ. ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ 314, ಕೋವಿಡ್‌ ಚಿಕಿತ್ಸಾ ಕೇಂದ್ರದಲ್ಲಿ 104, ಕೋವಿಡ್‌ ಕೇರ್‌ ಕೇಂದ್ರದಲ್ಲಿ 681, ಖಾಸಗಿ ಕೋವಿಡ್‌ ಕೇರ್‌ ಕೇಂದ್ರದಲ್ಲಿ 186 ಹಾಗೂ ಖಾಸಗಿ ಆಸ್ಪತ್ರೆಯಲ್ಲಿ 299 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ 15 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 706ಕ್ಕೆ ಏರಿಕೆಯಾಗಿದೆ. 73, 69, 65, 66, 85, 62, 68 ವರ್ಷದ ಪುರುಷರು ಹಾಗೂ 72, 65, 80, 58, 71, 50, 59, 45 ವರ್ಷದ ಮಹಿಳೆಯರು ಮೃತರಲ್ಲಿ ಸೇರಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು