ಶನಿವಾರ, ಜೂನ್ 19, 2021
23 °C

ಕೊರೊನಾ ಹಿನ್ನೆಲೆ: ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಸ್‌.ಎಲ್‌.ಭೈರಪ್ಪ ದೇಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಸಾಹಿತಿ ಎಸ್.ಎಲ್.ಭೈರಪ್ಪ ಅವರು ಮುಖ್ಯಮಂತ್ರಿ ಕೋವಿಡ್-19 ಪರಿಹಾರ ನಿಧಿಗಾಗಿ  ₹ 1 ಲಕ್ಷ ದೇಣಿಗೆ ಚೆಕ್‌ ಅನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರಿಗೆ ಹಸ್ತಾಂತರಿಸಿದರು. ಈ ವೇಳೆ ಮೈಸೂರು ಸಂಸದ ಪ್ರತಾಪ ಸಿಂಹ ಹಾಜರಿದ್ದರು.

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 197ಕ್ಕೆ ಏರಿಕೆಯಾಗಿದೆ. ನಿನ್ನೆ (ಏ.8) ಸಂಜೆ 5ರಿಂದ ಇಂದು (ಏ.9) ಸಂಜೆ 5 ಗಂಟೆಯ ಅವಧಿಯಲ್ಲಿ ಒಟ್ಟು 16 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ಒಟ್ಟು 28 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು 6 ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ 5, ಬೆಳಗಾವಿಯಲ್ಲಿ 4, ಬಾಗಲಕೋಟೆಯಲ್ಲಿ 3, ಮೈಸೂರಿನಲ್ಲಿ 2 ಹಾಗೂ ಚಿಕ್ಕಬಳ್ಳಾಪುರ, ಧಾರವಾಡ, ತಲಾ ಒಂದು ಪ್ರಕರಣಗಳು ದೃಢಪಟ್ಟಿವೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು