ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಹಿನ್ನೆಲೆ: ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಸ್‌.ಎಲ್‌.ಭೈರಪ್ಪ ದೇಣಿಗೆ

Last Updated 9 ಏಪ್ರಿಲ್ 2020, 13:59 IST
ಅಕ್ಷರ ಗಾತ್ರ

ಮೈಸೂರು: ಸಾಹಿತಿ ಎಸ್.ಎಲ್.ಭೈರಪ್ಪ ಅವರು ಮುಖ್ಯಮಂತ್ರಿ ಕೋವಿಡ್-19 ಪರಿಹಾರ ನಿಧಿಗಾಗಿ ₹ 1 ಲಕ್ಷ ದೇಣಿಗೆ ಚೆಕ್‌ ಅನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರಿಗೆ ಹಸ್ತಾಂತರಿಸಿದರು. ಈ ವೇಳೆ ಮೈಸೂರು ಸಂಸದ ಪ್ರತಾಪ ಸಿಂಹ ಹಾಜರಿದ್ದರು.

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 197ಕ್ಕೆ ಏರಿಕೆಯಾಗಿದೆ. ನಿನ್ನೆ (ಏ.8) ಸಂಜೆ 5ರಿಂದ ಇಂದು (ಏ.9) ಸಂಜೆ 5 ಗಂಟೆಯ ಅವಧಿಯಲ್ಲಿ ಒಟ್ಟು 16 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ಒಟ್ಟು 28 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು 6 ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ 5, ಬೆಳಗಾವಿಯಲ್ಲಿ 4, ಬಾಗಲಕೋಟೆಯಲ್ಲಿ 3, ಮೈಸೂರಿನಲ್ಲಿ 2 ಹಾಗೂ ಚಿಕ್ಕಬಳ್ಳಾಪುರ, ಧಾರವಾಡ, ತಲಾ ಒಂದು ಪ್ರಕರಣಗಳು ದೃಢಪಟ್ಟಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT