ಮೈಸೂರು ಜಿಲ್ಲೆಯಲ್ಲಿ ಒಂದು ವಾರ ಲಾಕ್ಡೌನ್ ವಿಸ್ತರಣೆ: ಸೋಮಶೇಖರ್

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಜೂನ್ 14ರಿಂದ ಮತ್ತೊಂದು ವಾರ ಲಾಕ್ಡೌನ್ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಗುರುವಾರ ಇಲ್ಲಿ ತಿಳಿಸಿದರು.
ಜನಪ್ರತಿನಿಧಿಗಳ ಜೊತೆಗಿನ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶಾಸಕರು, ಸಂಸದರ ಜೊತೆ ಚರ್ಚಿಸಿ, ಲಾಕ್ಡೌನ್ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ. ಜೂನ್ 14ರಂದು ಲಾಕ್ಡೌನ್ ಸ್ವರೂಪದ ಬಗ್ಗೆ ಮಾಹಿತಿ ನೀಡಲಾಗುವುದು' ಎಂದರು.
ಜಿಲ್ಲೆಯಲ್ಲಿ ಶೇ 20 ಪಾಸಿಟಿವಿಟಿ ಪ್ರಮಾಣ ಇದ್ದು, ಅದನ್ನು ಈ ತಿಂಗಳ ಅಂತ್ಯದೊಳಗೆ ಶೇ 5ರೊಳಗೆ ತರಲು ಪ್ರಯತ್ನಿಸಲಾಗುವುದು. ಅದಕ್ಕಾಗಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಒಂದೇ ವಾಹನದಲ್ಲಿ ಜಿಲ್ಲಾ ಪ್ರವಾಸ ಕೈಗೊಂಡು ಪರಿಶೀಲನೆ ನಡೆಸಬೇಕು' ಎಂದು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.