ಮೈಸೂರು: ನಾಡಹಬ್ಬ ಮೈಸೂರು ದಸರಾ ಅಂಗವಾಗಿ, ಜನರ ಆರೋಗ್ಯದ ಹಿತದೃಷ್ಟಿಯಿಂದ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ನಗರದಲ್ಲಿ ಕೋವಿಡ್ ಉಚಿತ ಲಸಿಕಾ ಶಿಬಿರವನ್ನು ಆಯೋಜಿಸಲಾಗಿದೆ.
‘ಕೋವಿಡ್ ಲಸಿಕೆ ಪಡೆದವರ ಸಂಖ್ಯೆ ನಗರದಲ್ಲಿ ಹೆಚ್ಚಾಗುತ್ತಿದೆ. ಆದರೆ, ಇನ್ನೂ ಕೆಲವರು ಲಸಿಕೆ ಪಡೆಯುವಲ್ಲಿ ವಿಫಲರಾಗಿದ್ದು, ಈ ನಿಟ್ಟಿನಲ್ಲಿ ಉಚಿತ ಲಸಿಕಾ ಅಭಿಯಾನ ನಡೆಸುತ್ತಿದ್ದೇವೆ’ ಎಂದುಆಸ್ಪತ್ರೆಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ಅಶೋಕ್ ಸೋಮವಾರ ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ನಗರದ ರಿಂಗ್ ರಸ್ತೆಯಲ್ಲಿರುವ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಶಿವರಾಂಪೇಟೆಯಲ್ಲಿರುವ ನಾರಾಯಣ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್‌ನಲ್ಲಿ ಅ.12ರ ಮಂಗಳವಾರದಿಂದ ಶಿಬಿರ ನಡೆಯಲಿದೆ. ಒಂದು ಸಾವಿರ ಜನರಿಗೆ ಉಚಿತವಾಗಿ, ಕೊವ್ಯಾಕ್ಸಿನ್ ಮೊದಲ ಹಾಗೂ ಎರಡನೇ ಡೋಸ್ ಲಸಿಕೆಗಳನ್ನು ಹಾಕಲಾಗುವುದು. ಆಸಕ್ತರು 9538052378ಗೆ ಸಂಪರ್ಕಿಸಿ’ ಎಂದು ಅವರು ಹೇಳಿದರು.
‘ಪ್ರಸ್ತುತ ಆಸ್ಪತ್ರೆಯಲ್ಲಿ ಉಳಿದಿರುವ ಲಸಿಕೆ ಹಾಕಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತೆ ಲಸಿಕೆ ಬಂದರೆ ಅವುಗಳನ್ನು ವಿತರಿಸುವ ಶಿಬಿರ ನಡೆಸುತ್ತೇವೆ’ ಎಂದು ಪ್ರಶ್ನೆಯೊಂದಕ್ಕೆ ಡಾ.ಅಶೋಕ್ ಉತ್ತರಿಸಿದರು.
ಆಸ್ಪತ್ರೆಯ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಕೆ.ವಿ.ಕಾಮತ್ ಪತ್ರಿಕಾಗೋಷ್ಠಿಯಲ್ಲಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.