ಗುರುವಾರ , ಅಕ್ಟೋಬರ್ 22, 2020
23 °C
ಕೊರೊನಾ ಸೋಂಕಿನಿಂದ ಜಿಲ್ಲೆಯಲ್ಲಿ 18 ಮಂದಿ ಸಾವು

ಮೈಸೂರಿನಲ್ಲಿ ಒಂದೇ ದಿನ 1,514 ಪ್ರಕರಣ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಜಿಲ್ಲೆಯಲ್ಲಿ ಕೋವಿಡ್‌– 19 ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಶನಿವಾರ ಬಾರಿ ಜಿಗಿತ ಕಂಡಿದೆ. ಒಂದೇ ದಿನ 1,514  ಸೋಂಕಿತರು ಪತ್ತೆಯಾಗಿದ್ದಾರೆ.

ಇದರೊಂದಿಗೆ ಕೋವಿಡ್‌ ಬಾಧಿ ತರ ಒಟ್ಟು ಸಂಖ್ಯೆ 36,291ಕ್ಕೇರಿದೆ. 18 ಮಂದಿ ಮೃತಪಟ್ಟಿದ್ದಾರೆ.

ಕೊರೊನಾ ಸೋಂಕಿನಿಂದ 859 ಮಂದಿ ಚೇತರಿಸಿಕೊಂಡಿದ್ದು, ಗುಣಮುಖರಾದವರ ಒಟ್ಟು ಸಂಖ್ಯೆ 28,465ಕ್ಕೇರಿದೆ. ಒಟ್ಟು 7,028 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ 318, ಕೋವಿಡ್‌ ಚಿಕಿತ್ಸಾ ಕೇಂದ್ರದಲ್ಲಿ 71, ಕೋವಿಡ್‌ ಕೇರ್‌ ಕೇಂದ್ರದಲ್ಲಿ 623, ಖಾಸಗಿ ಕೋವಿಡ್‌ ಕೇರ್‌ ಕೇಂದ್ರದಲ್ಲಿ 228 ಹಾಗೂ ಖಾಸಗಿ ಆಸ್ಪತ್ರೆಯಲ್ಲಿ 609 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 5,179 ಮಂದಿಯನ್ನು ಮನೆ ಯಲ್ಲೇ ಐಸೊಲೇಷನ್‌ ಮಾಡಲಾಗಿದೆ. 

ಇದುವರೆಗೆ ಸೋಂಕಿನಿಂದ ಮೃತರಾ ದವರ ಒಟ್ಟು ಸಂಖ್ಯೆ 798ಕ್ಕೇರಿದೆ.  ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 1,86,692 ಕೋವಿಡ್‌ ಪರೀಕ್ಷೆಗಳನ್ನು ನಡೆಸಲಾಗಿದೆ. 48,969 ಮಂದಿ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ.

ಹೆಚ್ಚಿದ ಪರೀಕ್ಷಾ ಕೇಂದ್ರ: ಮೈಸೂರು ಮಹಾನಗರ ಪಾಲಿಕೆಯು ಕೋವಿಡ್‌–19 ಪರೀಕ್ಷೆಗಾಗಿ ಮಾದರಿ ಪಡೆಯಲು ನಗರದ ವಿವಿಧೆಡೆ 22 ಕೇಂದ್ರ ತೆರೆದಿದೆ. ಅಲ್ಲದೇ, ವ್ಯಾಪಾರಸ್ಥರ ಆರೋಗ್ಯ ಹಿತದೃಷ್ಟಿಯಿಂದ ದೇವರಾಜ ಮಾರುಕಟ್ಟೆ, ವಾಣಿ ವಿಲಾಸ ಮಾರುಕಟ್ಟೆ, ಗಾಂಧಿನಗರ ಮತ್ತು ಮಂಡಿ ಮಾರುಕಟ್ಟೆಯಲ್ಲಿ ಕೋವಿಡ್‌ ತಪಾಸಣೆ ನಡೆಸುತ್ತಿದೆ. ಕಡ್ಡಾಯವಾಗಿ ಎರಡು ವಾರಕ್ಕೊಮ್ಮೆ ಪರೀಕ್ಷೆ ಮಾಡಿಸಿಕೊಳ್ಳಲು ಸಲಹೆ ನೀಡಿದೆ. ಮೊಬೈಲ್‌ ತಂಡಗಳನ್ನೂ ರಚಿಸಿದೆ. 

ಕೆ.ಆರ್‌.ಆಸ್ಪತ್ರೆಯಲ್ಲಿ ಸೋಮ ವಾರದಿಂದ 24x7 ಕೋವಿಡ್‌ ತಪಾಸಣೆ ಕೇಂದ್ರ ಸ್ಥಾಪಿಸಲು ಕ್ರಮ ವಹಿಸಲಾಗು ವುದು ಎಂದು ಪಾಲಿಕೆ ಪ್ರಕಟಣೆಯಲ್ಲಿ ತಿಳಿಸಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.