ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಾದ್ಯಂತ ಮಕ್ಕಳ ಆರೋಗ್ಯ ತಪಾಸಣೆ: ಬೊಮ್ಮಾಯಿ

Last Updated 9 ಆಗಸ್ಟ್ 2021, 14:32 IST
ಅಕ್ಷರ ಗಾತ್ರ

ಮೈಸೂರು: ಕೊರೊನಾ ಮೂರನೇ ಅಲೆಯಿಂದ ಮಕ್ಕಳನ್ನು ರಕ್ಷಿಸುವ ಉದ್ದೇಶದಿಂದ ರಾಜ್ಯದಾದ್ಯಂತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಇಲ್ಲಿ ತಿಳಿಸಿದರು.

ಸಚಿವರು, ಶಾಸಕರು ಹಾಗೂ ಜಿಲ್ಲಾಧಿಕಾರಿ ಜೊತೆ ಕೋವಿಡ್ ಪರಿಶೀಲನೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮ ಹಾಗೂ ಶಾಲೆಗಳಲ್ಲಿ ಶಿಬಿರ ಆಯೋಜಿಸಿ, 16 ವರ್ಷದೊಳಗಿನ ಎಲ್ಲಾ ಮಕ್ಕಳನ್ನು ತಪಾಸಣೆಗೆ ಒಳಪಡಿಸಬೇಕು. 15 ದಿನಗಳ ಬಳಿಕ ಮತ್ತೊಮ್ಮೆ ತಪಾಸಣೆ ನಡೆಸಬೇಕು. ಆರೋಗ್ಯ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕಂದಾಯ ಇಲಾಖೆಗಳು ಜೊತೆಗೂಡಿ ಈ ಕಾರ್ಯ ನಡೆಸಬೇಕು’ ಎಂದರು.

‘ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಪೌಷ್ಟಿಕ ಆಹಾರದ ಕಿಟ್‌ ನೀಡಿ, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬೇಕು. ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಕ್ರಮವಹಿಸಬೇಕು’ ಎಂದು ಸೂಚನೆ ನೀಡಿದರು.

ಈಗಾಗಲೇ ಹಾವೇರಿ ಜಿಲ್ಲೆಯಲ್ಲಿ ಈ ಯೋಜನೆ ಕೈಗೆತ್ತಿಕೊಂಡಿದ್ದು ಯಶಸ್ವಿಯಾಗಿದೆ. ಮೂರನೇ ಅಲೆಯಿಂದ ರಕ್ಷಿಸಲು ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕೆಂದು ಪರಿಣತರು ಕೂಡ ಸಲಹೆ ನೀಡಿದ್ದಾರೆ ಎಂದು ಹೇಳಿದರು.

ನಿತ್ಯ 5 ಲಕ್ಷ ಲಸಿಕೆ ಗುರಿ:

ರಾಜ್ಯದಲ್ಲಿ ನಿತ್ಯ 5 ಲಕ್ಷ ಮಂದಿಗೆ ಕೋವಿಡ್‌ ಲಸಿಕೆ ಹಾಕುವ ಗುರಿ ಹೊಂದಿದ್ದು, ಅದಕ್ಕಾಗಿ ತಿಂಗಳಿಗೆ 1.5 ಕೋಟಿ ಡೋಸ್‌ ಲಸಿಕೆಗಾಗಿ ಕೇಂದ್ರಕ್ಕೆ ಬೇಡಿಕೆ ಇಡಲಾಗಿದೆ ಎಂದು ತಿಳಿಸಿದರು.

‘ಕೇಂದ್ರದಿಂದ ಸದ್ಯ 65 ಲಕ್ಷ ಡೋಸ್‌ ಲಸಿಕೆ ಲಭ್ಯವಾಗುತ್ತಿದೆ. ಅದನ್ನು 1 ಕೋಟಿಗೆ ಹೆಚ್ಚಿಸುವುದಾಗಿ ಹೇಳಿದ್ದಾರೆ. ಮುಂದಿನ ತಿಂಗಳಿನಿಂದ 1.5 ಕೋಟಿ ಡೋಸ್‌ ಲಸಿಕೆ ಲಭ್ಯವಾಗಲಿದೆ’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT